ಉಡುಪಿ ವಿಡಿಯೋ ಚಿತ್ರೀಕರಣ ವಿವಾದ
ಹೈಗ್ರೌಂಡ್ಸ್ ಠಾಣೆ ಪೊಲೀಸರಿಂದ ಅರೆಸ್ಟ್
ಅಷ್ಟಕ್ಕೂ ಶಕುಂತಲಾ ಮಾಡಿದ ಟ್ವೀಟ್ ಏನು..?
ತುಮಕೂರು ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.
ಉಡುಪಿಯ ಖಾಸಗಿ ಕಾಲೇಜು ಒಂದರಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ಜುಲೈ 25 ರಂದು ಟ್ವೀಟ್ ಮಾಡಿತ್ತು. ಉಡುಪಿಯ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ, ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಎಬಿವಿಪಿ ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?
ವಿದ್ಯಾರ್ಥಿನಿಯರ ಮಕ್ಕಳಾಟವನ್ನು ರಾಜಕೀಯ ಕಳ್ಳಾಟಕ್ಕೆ ಬಳಸಿಕೊಳ್ಳಲು ಉಪ್ಪು, ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿ ಕರ್ನಾಟಕಕ್ಕೆ ನಮ್ಮ ದಕ್ಷ ಪೊಲೀಸರು ತಡ ಮಾಡದೇ ತನಿಖೆ ಮಾಡಿ ಸತ್ಯಾಂಶವನ್ನು ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ಶಕುಂತಲ ಮಾಡಿದ್ದ ಟ್ವೀಟ್ನಲ್ಲಿ ಏನಿತ್ತು..?
ಈ ಟ್ವೀಟ್ನ ಸ್ಕ್ರೀನ್ ಶಾಟ್ ತೆಗೆದು ಟ್ವೀಟ್ ಮಾಡಿದ್ದ ಶಕುಂತಲಾ ಅವರು, ಮುಸ್ಲಿಂ ಯುವತಿಯರು ಟಾಯ್ಲೆಟ್ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಎಂದು ಒಪ್ಕೋತೀರಾ? ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ವಿರುದ್ಧ ದೂರು ದಾಖಲಿಸಿಕೊಂಡ ಹೈಗ್ರೌಂಡ್ಸ್ ಠಾಣೆ ಪೊಲೀಸರು ಶಕುಂತಲಾ ಅವರನ್ನು ಬಂಧಿಸಿದ್ದಾರೆ.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R— ಶಕುಂತಲ🪷Shakunthala (@ShakunthalaHS) July 25, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ