/newsfirstlive-kannada/media/post_attachments/wp-content/uploads/2025/05/sophia_qureshi-1.jpg)
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ಕೃತ್ಯಕ್ಕೆ ಭಾರತ ಆಪರೇಷನ್ ಸಿಂಧೂರ ಮೂಲಕ ಪಾಕ್​ಗೆ ತಿರುಗೇಟು ಕೊಟ್ಟಿತ್ತು. ಈ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಕರ್ನಲ್ ಸೋಫಿಯಾ ಖುರೇಷಿ ಅವರು ಮಾಹಿತಿ ನೀಡಿದ್ದರು. ಆದರೆ ಸೋಫಿಯಾ ಖುರೇಷಿ ವಿರುದ್ಧ ಬಿಜೆಪಿ ಸಚಿವರೊಬ್ಬರು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಡಕಟ್ಟು ಕಲ್ಯಾಣ ಸಚಿವ ಕುನ್ವರ್ ವಿಜಯ್ ಶಾ ಮಾತನಾಡುತ್ತಿದ್ದರು. ಈ ವೇಳೆ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ವಿಜಯ್ ಶಾ ವ್ಯಾಖ್ಯಾನ ಮಾಡಿದ್ದಾರೆ. ಹೀಗೆ ಕರೆದಿರುವುದೇ ಸದ್ಯ ವಿವಾದಾತ್ಮಕ ಹೇಳಿಕೆ ಆಗಿದೆ.
ಇದನ್ನೂ ಓದಿ: ಕೊಕೇನ್​ ಸೇವನೆಗಾಗಿ 1 ಕೋಟಿ ಮೌಲ್ಯದ ಆಸ್ತಿ ಮಾರಿದ ಪ್ರತಿಷ್ಠಿತ ಆಸ್ಪತ್ರೆಯ ಮಾಜಿ CEO
/newsfirstlive-kannada/media/post_attachments/wp-content/uploads/2025/05/sophia_qureshi_1.jpg)
ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಒರೆಸುವ ಮೂಲಕ ಅಗೌರವ ತೋರಿದ್ದರು. ಅವರಿಗೆ ಸೂಕ್ತ ಉತ್ತರ ನೀಡಲು ಮೋದಿಜೀ ಅವರದ್ದೇ ಜಾತಿಯವರಾದ ಅವರ ಸಹೋದರಿಯನ್ನೇ ಕಳುಹಿಸಿ ಅವರ ಬಟ್ಟೆಬಿಚ್ಚಿ ಹೊಡೆದರು ಎಂದು ವಿಜಯ್ ಶಾ ಹೇಳಿದ್ದಾರೆ.
ಪ್ರತಿಯೊಬ್ಬ ಭಾರತೀಯ ಭಾರತದ ಹೆಮ್ಮೆಯ ಪುತ್ರಿ ಸೋಫಿಯಾ ಬಗ್ಗೆ ಹೆಮ್ಮೆಪಡುತ್ತಿದ್ದಾರೆ. ಆದರೆ ಕುನ್ವರ್ ವಿಜಯ್ ಶಾ ಹೇಳಿಕೆ ತೀವ್ರ ನೋವುಂಟು ಮಾಡಿದೆ. ಇದು ಸೇನಾ ಪಡೆಗಳಿಗೆ ಹಾಗೂ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us