newsfirstkannada.com

BREAKING: ಕೊನೆಗೂ ಬಿಜೆಪಿಗೆ ಕೈ ಕೊಟ್ಟ ಶಾಸಕ ಎಸ್.ಟಿ ಸೋಮಶೇಖರ್

Share :

Published February 27, 2024 at 11:43am

Update February 27, 2024 at 11:49am

    ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ

    ಬಿಜೆಪಿಗೆ ಕೈ ಕೊಟ್ಟ ಎಸ್‌.ಟಿ ಸೋಮಶೇಖರ್‌ ಅವರಿಂದ ಮತದಾನ

    ರಾಜ್ಯಸಭಾ ಚುನಾವಣೆಯಲ್ಲಿ ಭರ್ಜರಿ ರಾಜಕೀಯದ ಲೆಕ್ಕಾಚಾರ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಎಲೆಕ್ಷನ್ ಏಜೆಂಟ್ ಸುನೀಲ್ ಕುಮಾರ್‌ ಅವರು ಈ ಬಗ್ಗೆ ನ್ಯೂಸ್ ಫಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಅಭಿವೃದ್ಧಿಗೆ ನನ್ನ ಮತ’ ಎಂದ ಸೋಮಶೇಖರ್; ರಾಜ್ಯಸಭಾ ಎಲೆಕ್ಷನ್​​ನಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಗೆ ಚೆಕ್​ಮೇಟ್ ಇಟ್ರಾ..?

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕೊನೆಗೂ ಬಿಜೆಪಿಗೆ ಕೈ ಕೊಟ್ಟ ಶಾಸಕ ಎಸ್.ಟಿ ಸೋಮಶೇಖರ್

https://newsfirstlive.com/wp-content/uploads/2024/02/ST-Somashekar-1.jpg

Load More