newsfirstkannada.com

ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಗೆ ಬಿಜೆಪಿ ಶಾಸಕ ಸಾಥ್‌?; ಏನಿದು ಗ್ಯಾರಂಟಿ ಗೇಮ್‌?

Share :

30-08-2023

  ಮೈಸೂರಲ್ಲಿ ಬಿಜೆಪಿ ವಿರುದ್ಧ ಅಬ್ಬರಿಸಿದ ಕಾಂಗ್ರೆಸ್ ನಾಯಕರು

  ಸರ್ಕಾರದ ಯೋಜನೆಗೆ ಜಾರಿಗೆ ತರಲು ಸಜ್ಜಾದ ಬಿಜೆಪಿ ಶಾಸಕ

  ಗ್ಯಾರಂಟಿ ‘ಗೃಹಲಕ್ಷ್ಮಿ’ ಕಾರ್ಯಕ್ರಮದ ಬಗ್ಗೆ ಎಸ್‌ಟಿಎಸ್ ಹೇಳಿದ್ದೇನು?

ಪ್ರತಿ ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ. ಮೈಸೂರಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಸಮಾವೇಶ ನಡೆಸಿದ್ದು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 4ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ ಎನ್ನುವ ಮೂಲಕ ಕಾಂಗ್ರೆಸ್ ವೋಟ್ ಹಾಕಿ ಗೆಲ್ಲಿಸಿದ ಜನರ ವಿಶ್ವಾಸವನ್ನು ಉಳಿಸಿಕೊಳ್ಳೋ ಪ್ರಯತ್ನ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ದಿನವೇ ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಕಾಂಗ್ರೆಸ್ ಸರ್ಕಾರದ ಯೋಜನೆ ಜಾರಿಗೆ ತರಲು ಪ್ರಯತ್ನಿಸಿದ್ದು ಗಮನ ಸೆಳೆದಿದ್ದಾರೆ.

ಶಾಸಕ ಎಸ್‌.ಟಿ ಸೋಮಶೇಖರ್ ಅವರ ಯಶವಂತಪುರ ಕ್ಷೇತ್ರದಲ್ಲಿ ಇವತ್ತು ಗೃಹಲಕ್ಷ್ಮಿ ಉದ್ಘಾಟನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂತೋಷದಿಂದಲೇ ಆಗಮಿಸಿದ ಸೋಮಶೇಖರ್ ಅವರು ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ರು. ಬಳಿಕದ ಮಾತನಾಡಿದ ಶಾಸಕರು ಗೃಹಲಕ್ಷ್ಮಿ ಯೋಜನೆ ಸರ್ಕಾರದ ಕಾರ್ಯಕ್ರಮ. ಇದರಲ್ಲಿ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್ ಅಂತಾ ಇಲ್ಲ​ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ಹಿನ್ನೆಲೆ ಇವತ್ತು ರಾಜ್ಯದ ವಿವಿಧೆಡೆ ಮಹಿಳಾಮಣಿಯರು ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸ್ಥಳೀಯರ ಶಾಸಕರು, ಕಾಂಗ್ರೆಸ್ ನಾಯಕರು ಚಾಲನೆ ನೀಡಿದ್ದಾರೆ. ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರ ಯಶವಂತಪುರ ಕ್ಷೇತ್ರದಲ್ಲೂ ಗೃಹಲಕ್ಷ್ಮಿ ಯೋಜನೆಯ 94 ಸಾವಿರ ಫಲಾನುಭವಿಗಳಿದ್ದಾರೆ. ಹೀಗಾಗಿ ಅವರಿಗೆಲ್ಲಾ ಸರ್ಕಾರದ ಯೋಜನೆ ತಲುಪಿಸೋದು ಶಾಸಕನಾಗಿ ನನ್ನ ಜವಾಬ್ದಾರಿ. ಕ್ಷೇತ್ರದ ಎಲ್ಲಾ ವಾರ್ಡ್​ಗಳಲ್ಲೂ ಮಾಡಲು ಹೇಳಿದ್ದರು. ಹೀಗಾಗಿ ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದೇನೆ ಎಂದು ಶಾಸಕ ಎಸ್​. ಟಿ ಸೋಮಶೇಖರ್​ ಹೇಳಿದ್ದಾರೆ.

ಇತ್ತೀಚೆಗೆ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗುತ್ತಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ ಎಸ್‌.ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಯ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಉತ್ಸಾಹವನ್ನು ತೋರುತ್ತಿರೋದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಗೆ ಬಿಜೆಪಿ ಶಾಸಕ ಸಾಥ್‌?; ಏನಿದು ಗ್ಯಾರಂಟಿ ಗೇಮ್‌?

https://newsfirstlive.com/wp-content/uploads/2023/08/ST-Somashekar-3.jpg

Load More