newsfirstkannada.com

ಸಿಎಂ ಸಿದ್ದರಾಮಯ್ಯ ಕಾರಿನಲ್ಲಿ ಪ್ರತ್ಯಕ್ಷವಾದ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್‌; ಏನಿದರ ಸುಳಿವು?

Share :

Published January 27, 2024 at 2:03pm

Update January 27, 2024 at 2:04pm

  ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿದ ಬಳಿಕ ಮಹತ್ವದ ಬೆಳವಣಿಗೆ

  ಬಿಜೆಪಿ ಕಾರ್ಯಕಾರಿಣಿಗೆ ಗೈರು ಹಾಜರಾದ ಎಸ್‌.ಟಿ ಸೋಮಶೇಖರ್

  ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಕಾರಿನಲ್ಲಿ ತೆರಳಿದ ಬಿಜೆಪಿ ಶಾಸಕ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ ಮೇಲೆ ದೊಡ್ಡ, ದೊಡ್ಡ ನಾಯಕರು ಅಲರ್ಟ್ ಆಗಿದ್ದಾರೆ. ಯಾವ ಶಾಸಕರು ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಕಣ್ಣಿಟ್ಟಿದ್ದಾರೆ.

ರಿವರ್ಸ್‌ ಆಪರೇಷನ್ ಭಯದ ಮಧ್ಯೆ ಶಾಸಕ ಎಸ್‌.ಟಿ ಸೋಮಶೇಖರ್ ಇವತ್ತು ಬೆಂಗಳೂರಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಗೈರು ಹಾಜರಾಗಿದ್ದಾರೆ. ಕಾರ್ಯಕಾರಿಣಿಯಿಂದ ದೂರ ಉಳಿಯೋದ್ರ ಜೊತೆಗೆ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರಿನ ನೈಸ್ ರಸ್ತೆ ಬಳಿಯ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಕಾರಿನಲ್ಲಿ ಶಕ್ತಿಭವನದವರೆಗೆ ಎಸ್.ಟಿ ಸೋಮಶೇಖರ್ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್.ಟಿ ಸೋಮಶೇಖರ್ ಅವರು ಬಿಜೆಪಿ ಕಾರ್ಯಕಾರಿಣಿಯ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ನನಗೆ ಆಹ್ವಾನವೂ ಇರಲಿಲ್ಲ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ‘ಕೇಸರಿ’ ಸಮರ.. ಇಂದು ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಇನ್ನು, ಜಗದೀಶ್ ಶೆಟ್ಟರ್ ಅವರಿಗೂ ನಮಗೂ ಬಹಳಷ್ಟು ವ್ಯತ್ಯಾಸವಿದೆ. ಶೆಟ್ಟರ್‌ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ಗೆ ಹೋಗಿದ್ರು. ಕಾಂಗ್ರೆಸ್ ಪಕ್ಷ ಅವರನ್ನ ಗುರುತಿಸಿ MLC ಮಾಡಿತ್ತು. ಇದೀಗ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಹೋಗಿದ್ದಾರೆ. ನನ್ನದೇನು ಪ್ರಶ್ನೆ ಇಲ್ಲ. ನಾನು ಬಿಜೆಪಿಯಲ್ಲೇ ಇದ್ದೇನೆ ಎಂದು ಎಸ್‌.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಎಂ ಸಿದ್ದರಾಮಯ್ಯ ಕಾರಿನಲ್ಲಿ ಪ್ರತ್ಯಕ್ಷವಾದ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್‌; ಏನಿದರ ಸುಳಿವು?

https://newsfirstlive.com/wp-content/uploads/2024/01/Siddaramaiah-ST-Somashekar.jpg

Load More