newsfirstkannada.com

ಡಿಕೆ ಶಿವಕುಮಾರ್ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳಬಹುದೇ?; ಸುರೇಶ್ ಕುಮಾರ್ ಆಕ್ಷೇಪ ಯಾಕೆ?

Share :

08-08-2023

    ಆಗಸ್ಟ್ 12ರಂದು ಮೈಸೂರಿನಲ್ಲಿ ಬಾರ್ ಕೌನ್ಸಿಲ್ ಕಾರ್ಯಕ್ರಮ

    ಸಿಎಂ ಸಿದ್ದರಾಮಯ್ಯಗೆ ಆಹ್ವಾನ ಓಕೆ.. ಡಿಸಿಎಂ ಡಿಕೆಶಿ ಯಾಕೆ?

    ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಸುರೇಶ್ ಕುಮಾರ್ ಪತ್ರ

ಬೆಂಗಳೂರು: ಇದೇ ಆಗಸ್ಟ್ 12ರಂದು ಮೈಸೂರಿನಲ್ಲಿ ಬಾರ್ ಕೌನ್ಸಿಲ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸುಪ್ರೀಂಕೋರ್ಟ್, ಹೈಕೋರ್ಟ್‌ನ ನ್ಯಾಯಮೂರ್ತಿಗಳು ಭಾಗವಹಿಸಲಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನ್ಯಾಯಮೂರ್ತಿಗಳ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವ ವಿಚಾರ ತೀವ್ರ ಚರ್ಚೆಗೆ ಗುರಿಯಾಗಿದೆ. ಬಿಜೆಪಿ ಹಿರಿಯ ನಾಯಕ, ಶಾಸಕ ಸುರೇಶ್ ಕುಮಾರ್ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಪತ್ರ ಬರೆದಿದ್ದಾರೆ. ನ್ಯಾಯಮೂರ್ತಿಗಳಿರುವ ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಆರೋಪಿ ಸ್ಥಾನದಲ್ಲಿರುವವರು ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳಬಹುದೇ ಎಂದು ಪ್ರಶ್ನಿಸಿದ್ದಾರೆ. ತಾವು ಕಾನೂನು ಸಚಿವರಾಗಿದ್ದಾಗ ವೇದಿಕೆ ಹಂಚಿಕೊಳ್ಳುವವರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿತ್ತು. ಅವರ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿತ್ತು. ಆದರೆ ಈಗ ಆ ಶಿಷ್ಟಾಚಾರ ಅನ್ವಯವಾಗುವುದಿಲ್ಲವೇ ಎಂದು ತನ್ನ ಪತ್ರದಲ್ಲಿ ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.

ಇದೇ ಆಗಸ್ಟ್ 12ರಂದು ಮೈಸೂರಿನಲ್ಲಿ ವಕೀಲರ ರಾಜ್ಯ ಮಟ್ಟದ 10ನೇ ಸಮಾವೇಶ ನಡೆಯಲಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ಜಾಮೀನಿನ ಮೇಲೆ ಹೊರಗಿರುವ ಡಿ.ಕೆ ಶಿವಕುಮಾರ್ ಅವರು ಸುಪ್ರೀಂಕೋರ್ಟ್, ಹೈಕೋರ್ಟ್‌ನ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವುದು ಸರಿಯೇ ಎಂದು ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ನ್ಯೂಸ್‌ ಫಸ್ಟ್ ಜೊತೆ ಮಾತನಾಡಿರುವ ಸುರೇಶ್ ಕುಮಾರ್ ಅವರು ಸದ್ದುದ್ದೇಶದಿಂದ ನಾನು ಪತ್ರ ಬರೆದಿದ್ದೇನೆ. ಅದಕ್ಕೆ ಬಾರ್ ಕೌನ್ಸಿಲ್‌ನಿಂದ ಸ್ಪಂದನೆಯೂ ಸಿಕ್ಕಿದ್ದು, ತಿದ್ದುಪಡಿಯೂ ಆಗಬಹುದು ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಡಿಕೆ ಶಿವಕುಮಾರ್ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳಬಹುದೇ?; ಸುರೇಶ್ ಕುಮಾರ್ ಆಕ್ಷೇಪ ಯಾಕೆ?

https://newsfirstlive.com/wp-content/uploads/2023/08/Dk-Shivakumar-Suresh-Kumar.jpg

Load More