ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಂದೆ ನಿಧನ
ಇಂದು ಇಹಲೋಕ ತ್ಯಜಿಸಿದ 89 ವರ್ಷದ ಪುಟ್ಟಮಾದೇಗೌಡ ಅವ್ರು!
ನಿವೃತ್ತ ಶಿಕ್ಷಕರಾಗಿದ್ದ ಸಿ.ಪಿ. ಯೋಗೇಶ್ವರ್ ತಂದೆ ಪುಟ್ಟಮಾದೇಗೌಡ್ರು
ರಾಮನಗರ: ಮಾಜಿ ಸಚಿವ ಹಾಗೂ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಂದೆ ನಿಧನರಾಗಿದ್ದಾರೆ. ಇಂದು 89 ವರ್ಷದ ಪುಟ್ಟಮಾದೇಗೌಡ ಇಹಲೋಕ ತ್ಯಜಿಸಿದ್ದಾರೆ.
ಸಿ.ಪಿ. ಯೋಗೇಶ್ವರ್ ತಂದೆ ಪುಟ್ಟಮಾದೇಗೌಡ ಅವರು ನಿವೃತ್ತ ಶಿಕ್ಷಕರಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಮಾದೇಗೌಡ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೀಗ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪುಟ್ಟಮಾದೇಗೌಡರ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ನಡೆಯಲಿರೋ ಪುಟ್ಟಮಾದೇಗೌಡರ ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆದಿದೆ. ಇಡೀ ಕುಟುಂಬಸ್ಥರು ಶೋಕಾಚರಣೆಯಲ್ಲಿ ಮುಳುಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ