newsfirstkannada.com

‘ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ’- ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Share :

Published March 1, 2024 at 4:10pm

Update March 1, 2024 at 4:17pm

    ರಾಮೇಶ್ವರಂ ಕೆಫೆಯಲ್ಲಿ ಆಗಿರೋದು ಸಿಲಿಂಡರ್ ಸ್ಫೋಟ ಅಲ್ಲ!

    ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌

    ಬೆಂಗಳೂರಿಗರಿಗೆ ಉತ್ತರ ಕೊಡಲು ಸಿಎಂ ಸಿದ್ದರಾಮಯ್ಯಗೆ ಒತ್ತಾಯ

ಬೆಂಗಳೂರಿನ ಕುಂದನಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಯಾವುದೇ ಸಿಲಿಂಡರ್ ಸ್ಫೋಟವಲ್ಲ. ಇದೊಂದು ಬಾಂಬ್‌ ಸ್ಪೋಟದ ಘಟನೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಸೋಷಿಯಲ್‌ ಮೀಡಿಯಾ Xನಲ್ಲಿ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ ಅವರು, ರಾಮೇಶ್ವರಂ‌ ಕೆಫೆ ಮಾಲೀಕ ಶ್ರೀ ನಾಗರಾಜ್ ಅವರ ಜೊತೆಗೆ ಘಟನೆಯ ಬಗ್ಗೆ ಮಾತನಾಡಿದೆ. ಗ್ರಾಹಕರೊಬ್ಬರು ಬಿಟ್ಟು ಹೋದ ಬ್ಯಾಗ್‌ನಿಂದ ಸ್ಫೋಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕೆಫೆಯಲ್ಲಿ ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಘಟನೆಯಲ್ಲಿ ರಾಮೇಶ್ವರಂ ಕೆಫೆಯ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕಸದ ಬುಟ್ಟಿಯಲ್ಲಿದ್ದ ನಿಗೂಢ ವಸ್ತು ಸ್ಫೋಟ.. ರಾಮೇಶ್ವರಂ ಕೆಫೆಯಲ್ಲಿ ತಪ್ಪಿದೆ ದೊಡ್ಡ ಅನಾಹುತ 

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್ ಸ್ಫೋಟ ಅನ್ನೋದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗರಿಗೆ ಉತ್ತರ ಕೊಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ’- ಬಿಜೆಪಿ ಸಂಸದ ತೇಜಸ್ವಿ ಸೂರ್ಯ

https://newsfirstlive.com/wp-content/uploads/2024/03/Tejaswi-Surya-Rameshwar-Cafe.jpg

Load More