newsfirstkannada.com

ಬಿಜೆಪಿ ಸಂಸದ ಉಮೇಶ್ ಜಾಧವ್ ಅಸ್ವಸ್ಥ; ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು

Share :

Published May 1, 2024 at 1:37pm

    ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಸಂಸದ ಉಮೇಶ್ ಜಾಧವ್ ಅಸ್ವಸ್ಥ

    ಲಿಂಗಾಯತ ಸಮಾಜದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದರು

    ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಆರೋಪದಲ್ಲಿ ಹೋರಾಟ

ಕಲಬುರಗಿ: ಬಿಜೆಪಿ ಸಂಸದ ಉಮೇಶ್ ಜಾಧವ್ ಅವರು ಕುಸಿದು ಬಿದ್ದಿದ್ದು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲಬುರಗಿ ನಗರದ ಕೋಟನೂರ್ (D) ಬಳಿ ಲಿಂಗಾಯತ ಸಮಾಜದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್ ಅವರು ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಉಮೇಶ್ ಜಾಧವ್ ಅವರು ಗಂಟೆ ಗಟ್ಟಲೆ ಬಿರು ಬಿಸಿಲಿನಲ್ಲಿ ನಿಂತಿದ್ದರು. ಖಡಕ್ ಬಿಸಿಲಿಗೆ ಸುಸ್ತಾಗಿದ್ದ ಜಾಧವ್ ಅವರು ತಳ್ಳಾಟ, ನೂಕಾಟದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಅಸ್ವಸ್ಥರಾದ ಉಮೇಶ್ ಜಾಧವ್ ಅವರನ್ನು ಬಿಜೆಪಿ ನಾಯಕರು ಆ್ಯಂಬುಲೆನ್ಸ್ ಮೂಲಕ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಡರಾತ್ರಿ ಕಲುಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಆರೋಪದಲ್ಲಿ ಸಂಗಮೇಶ ಮಾಲೀ ಪಾಟೀಲ್ ಮನೆ ಮೇಲೆ ದಾಳಿ ಮಾಡಲಾಗಿತ್ತು. ಈ ದಾಳಿ ಖಂಡಿಸಿ ಲಿಂಗಾಯತ ಸಮಾಜದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನೂ ಓದಿ: ಶಾಕಿಂಗ್ ನ್ಯೂಸ್‌.. ಬೇಸಿಗೆಯಲ್ಲಿ 20 ಲಕ್ಷ ಕಿಡ್ನಿ ಸಮಸ್ಯೆಯ ಕೇಸ್ ದಾಖಲು; ಅಪಾಯ ಗ್ಯಾರಂಟಿ! 

ಈ ಪ್ರತಿಭಟನೆಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರು ಭಾಗಿಯಾಗಿದ್ದ ವೇಳೆ ನೂಕಾಟ ತಳ್ಳಾಟದಲ್ಲಿ ಅಸ್ವಸ್ಥರಾಗಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ಜಾಧವ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಸಂಸದ ಉಮೇಶ್ ಜಾಧವ್ ಅಸ್ವಸ್ಥ; ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/05/Umesh-Jadhav-Kalburgi-MP.jpg

Load More