newsfirstkannada.com

ರೇಣುಕಾಚಾರ್ಯ, ಯತ್ನಾಳ್​ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪಕ್ಷ -ದಿಢೀರ್ ಬುಲಾವ್

Share :

30-06-2023

  ಬಿಜೆಪಿಯಲ್ಲಿ ಹೆಚ್ಚಾಗಿದೆ ಪಕ್ಷದಲ್ಲಿನ ಒಳಬೇಗುದಿ

  ತಮ್ಮದೇ ನಾಯಕರ ವಿರುದ್ಧ ನಿರಂತರ ವಾಗ್ದಾಳಿ

  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಜೆಪಿ

ಬೆಂಗಳೂರು: ಪಕ್ಷದ ವಿರುದ್ಧ ಮಾತನಾಡಿದವರ ಮೇಲೆ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ನೀಡಲಾಗಿದೆ.

ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ಈ ಇಬ್ಬರು ನಾಯಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಬೆಂಗಳೂರಿನ ಕಚೇರಿಗೆ ಬರುವಂತೆಯೂ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚಿಸಿದ್ದಾರೆ. ಪಕ್ಷದ ಸೋಲಿನ ವಿಚಾರವಾಗಿ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬೊಮ್ಮಾಯಿ ವಿರುದ್ಧ ಆರೋಪ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೊಂದಾಣಿಕೆಯ ಆರೋಪ ಮಾಡಿದ್ದರು. ಇದೀಗ ಇಬ್ಬರಿಗೂ ಶಿಸ್ತು ಕ್ರಮದ ನೋಟಿಸ್ ಜಾರಿ ಮಾಡಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿಯಲ್ಲಿನ ಒಳಬೇಗುದಿ ಹೊರಗೆ ಬರುತ್ತಿದೆ. ಸಂಸದರಾದ ರಮೇಶ್ ಜಿಗಜಿಣಗಿ, ಪ್ರತಾಪ್ ಸಿಂಹ, ಶಾಸಕ ಯತ್ನಾಳ್, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಹಲವರು ಹಿರಿಯ ನಾಯಕರ ನಡೆ ವಿರುದ್ಧ ಕೆಂಡ ಕಾರುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರೇಣುಕಾಚಾರ್ಯ, ಯತ್ನಾಳ್​ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪಕ್ಷ -ದಿಢೀರ್ ಬುಲಾವ್

https://newsfirstlive.com/wp-content/uploads/2023/06/YATNAL_RENUKA.jpg

Load More