newsfirstkannada.com

ಬಿಜೆಪಿ ನಾಯಕರ ಮೇಲೆ ಮುನಿಸು? ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿಯಾದ ರೆಬೆಲ್ ರೇಣುಕಾಚಾರ್ಯ ಹೇಳಿದ್ದೇನು?

Share :

25-08-2023

    ‘ಮೂರು ತಿಂಗಳಾದ್ರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಿಲ್ಲ’

    ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ರೇಣುಕಾಚಾರ್ಯ ಸಿದ್ಧತೆ

    ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಡಿಕೆ ಶಿವಕುಮಾರ್ ಜೊತೆ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಆಪರೇಷನ್ ಹಸ್ತದ ಬಗ್ಗೆ ಚರ್ಚೆ ಜೋರಾಗಿರುವಾಗಲೇ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ನಡೆಯುತ್ತಿವೆ. ಮಾಜಿ ಸಚಿವ, ಬಿಜೆಪಿ ನಾಯಕ ಎಂ.ಪಿ ರೇಣುಕಾಚಾರ್ಯ ಅವರು ಇವತ್ತು ದಿಢೀರನೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವಾಗ ರೇಣುಕಾಚಾರ್ಯ ಅವರ ಈ ದಿಢೀರ್ ಭೇಟಿ ಕುತೂಹಲ ಮೂಡಿಸಿದೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ಎಂ.ಪಿ ರೇಣುಕಾಚಾರ್ಯ ಅವರು ಲೋಕಸಭಾ ಚುನಾವಣೆಯ ತಯಾರಿಯಲ್ಲಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿರುವ ಎಂ.ಪಿ ರೇಣುಕಾಚಾರ್ಯ ಅವರು ಇಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದ ಡಿ.ಕೆ ಶಿವಕುಮಾರ್ ನಿವಾಸಕ್ಕೆ ತೆರಳಿದ ರೇಣುಕಾಚಾರ್ಯ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಬಿಟ್ಟು ಹೋಗ್ತಾರಾ ಶಾಸಕ ST ಸೋಮಶೇಖರ್.. ಕಾಂಗ್ರೆಸ್​ ಆಪರೇಷನ್ ಬಗ್ಗೆ ಅಶೋಕ್ ಹೇಳಿದ್ದೇನು?

ರೆಬೆಲ್ ರೇಣುಕಾಚಾರ್ಯ ಹೇಳಿದ್ದೇನು?

ಡಿ.ಕೆ ಶಿವಕುಮಾರ್ ಬಳಿ ಸಮಾಲೋಚನೆ ನಡೆಸಿರುವ ರೇಣುಕಾಚಾರ್ಯ ಅವರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಎಲೆಕ್ಷನ್ ಮುಗಿದು ಮೂರು ತಿಂಗಳಾದ್ರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಿಲ್ಲ. ಇದರ ಜೊತೆಗೆ ವಿರೋಧ ಪಕ್ಷ ನಾಯಕರ ಆಯ್ಕೆಯೂ ಆಗಿಲ್ಲ. ಚುನಾವಣೆಯಲ್ಲಿ ಸೋತವರನ್ನ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಹಲವು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗಾಳ ಹಾಕಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರ ಈ ಭೇಟಿ ಕುತೂಹಲ ಕೆರಳಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜೊತೆ ಚರ್ಚಿಸೋ ಮುಂಚೆ ಎಂ.ಪಿ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಬೆಂಗಳೂರು ಶಿವಾನಂದ ವೃತ್ತದ ಸರ್ಕಾರಿ ನಿವಾಸದಲ್ಲಿ ರೇಣುಕಾಚಾರ್ಯ ಹಾಗೂ ಸಿಎಂ ಸಿದ್ದರಾಮಯ್ಯ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಸಿಎಂ ಜೊತೆ ಚರ್ಚಿಸಿದ ಬಳಿಕವೇ ರೇಣುಕಾಚಾರ್ಯ ಅವರು ಡಿಸಿಎಂ ಡಿಕೆಶಿ ನಿವಾಸಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ರೇಣುಕಾಚಾರ್ಯ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಹೊನ್ನಾಳಿ ಬರಗಾಲದ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ರಾಜಕೀಯದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ನಾಯಕರ ಮೇಲೆ ಮುನಿಸು? ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿಯಾದ ರೆಬೆಲ್ ರೇಣುಕಾಚಾರ್ಯ ಹೇಳಿದ್ದೇನು?

https://newsfirstlive.com/wp-content/uploads/2023/08/Renukacharya-DKShi.jpg

Load More