newsfirstkannada.com

BREAKING: ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Share :

Published March 2, 2024 at 6:35pm

Update March 2, 2024 at 6:39pm

    ದೆಹಲಿಯಲ್ಲಿ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    195 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ

    ಪ್ರಧಾನಿ ಮೋದಿ ಈ ಬಾರಿಯೂ ವಾರಾಣಸಿಯಿಂದಲೇ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ಬಿಜೆಪಿ ಪಕ್ಷದ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. 16 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಾಗಿದೆ.

ಬಿಜೆಪಿ ಮೊದಲ ಪಟ್ಟಿಯಲ್ಲಿ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ವಾರಾಣಸಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನುಳಿದಂತೆ 34 ಕೇಂದ್ರ ಸಚಿವರು, 28 ಮಹಿಳೆಯರಿಗೆ ಬಿಜೆಪಿ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿ ಪಕ್ಷದ ಮೊದಲ ಪಟ್ಟಿಯಲ್ಲಿ 50ಕ್ಕಿಂತ ಕಡಿಮೆ ವಯಸ್ಸಿನ 47 ಜನರ ಹೆಸರು ಇದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಿಂದುಳಿದ ವರ್ಗದ 57 ಜನರಿಗೆ ಹಾಗೂ ಪರಿಶಿಷ್ಟ ಜಾತಿ 27, ಪರಿಶಿಷ್ಟ ಪಂಗಡ 18 ಮಂದಿಗೆ ಟಿಕೆಟ್ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

https://newsfirstlive.com/wp-content/uploads/2024/02/MODI_SHAH.jpg

Load More