newsfirstkannada.com

ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಬಿ.ವೈ ವಿಜಯೇಂದ್ರ ಭೇಟಿ; ದಳಪತಿಗಳ ಜೊತೆ ಮಹತ್ವದ ಚರ್ಚೆ

Share :

13-11-2023

    ವಿಜಯೇಂದ್ರ ಅವರನ್ನು ಸ್ವಾಗತಿಸಿದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ

    ಹೆಚ್‌ಡಿಡಿ ಆಶೀರ್ವಾದ ಪಡೆದ ವಿಜಯೇಂದ್ರ ಅವರಿಂದ ಮಹತ್ವದ ಚರ್ಚೆ

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಹೆಜ್ಜೆ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಮನೆಗೆ ಭೇಟಿ ನೀಡಿದ್ದಾರೆ. ಪದ್ಮನಾಭನಗರದ ಹೆಚ್‌ಡಿಡಿ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರನ್ನು ಜೆಡಿಎಸ್‌ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಹೆಚ್‌.ಡಿ ದೇವೇಗೌಡರ ಭೇಟಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ವಾಗತಿಸಿದರು. ಬಳಿಕ ಹೆಚ್‌ಡಿಡಿ ಆಶೀರ್ವಾದ ಪಡೆದ ಬಿ.ವೈ ವಿಜಯೇಂದ್ರ ಅವರು ಕೆಲ ಹೊತ್ತು ಚರ್ಚೆ ನಡೆಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ರಾಜ್ಯ ಬಿಜೆಪಿಗೆ ಸಾರಥಿಯಾದ ಬಳಿಕ ವಿಜಯೇಂದ್ರ ಅವರು ಹಿರಿಯ ನಾಯಕರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಬಿ.ವೈ ವಿಜಯೇಂದ್ರ ಭೇಟಿ; ದಳಪತಿಗಳ ಜೊತೆ ಮಹತ್ವದ ಚರ್ಚೆ

https://newsfirstlive.com/wp-content/uploads/2023/11/Hd-Devegowda-By-Vijayendra-2.jpg

Load More