ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿಯಿಂದ ಸಾಲು ಸಾಲು ಪ್ರಶ್ನೆಗಳು
ಮುಂದಿನ 5 ವರ್ಷ ಸಿಎಂ ಸಿದ್ದರಾಮಯ್ಯನವರೇ? ಎಂಬುದು ಯಾರ ಸೃಷ್ಟಿ?
ಇದು ಕಾಂಗ್ರೆಸ್ ಸೃಷ್ಟಿ ಅಲ್ಲವೇ? ಎಂದು ಸಿದ್ದರಾಮಯ್ಯಗೆ ಟ್ವೀಟ್ ಮಾಡಿ ಪ್ರಶ್ನೆ!
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ. ಈ ಸಂಬಂಧ ಟ್ವೀಟ್ ಮಾಡಿರೋ ಕರ್ನಾಟಕ ಬಿಜೆಪಿ, ಮಾನ್ಯ ಸಿದ್ದರಾಮಯ್ಯರವರೇ ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮ ಸೃಷ್ಟಿಯೇ? ‘ಮಾಧ್ಯಮ’ ಅಂದ್ರೆ ಯಾರು ಸ್ವಾಮೀ? ಎಂದು ಪ್ರಶ್ನಿಸಿದೆ.
ಹೆಚ್. ಸಿ. ಮಹಾದೇವಪ್ಪ ಅವರಾ ಅಥವಾ ಸತೀಶ್ ಜಾರಕಿಹೊಳಿ ಅವರಾ? ಸಚಿವರಾದ ಎಂ. ಬಿ. ಪಾಟೀಲ್ ಅವರಾ ಅಥವಾ ಕೆ. ಎನ್. ರಾಜಣ್ಣ ಅವರಾ? ನಾರದನ ತುತ್ತೂರಿ ಊದುತ್ತಿರುವುದು ಯಾರು? ಅಣ್ಣನನ್ನು ಮುಖ್ಯಮಂತ್ರಿ ಆಗಿ ನೋಡಲು ಕಾಯುತ್ತಿರುವ ಡಿ. ಕೆ. ಸುರೇಶ್ ಅವರ ಆಕ್ರಂದನದ ಬಗ್ಗೆ ಮೊದಲು ಉತ್ತರಿಸಿ ಎಂದು ಸಿದ್ದರಾಮಯ್ಯ ವಿರುದ್ಧ ಕೆಂಡಕಾರಿದೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಈ ಹಿಂದೆ ಅಧಿಕಾರ ಹಂಚಿಕೆ ಬಗ್ಗೆ ನಿಮಗೆ ಗೊಂದಲ ಇದೆ. ನೀವು ಐದು ವರ್ಷ ಸಿಎಂ ಆಗಿರುತ್ತೀರಾ? ಎರಡೂವರೆ ವರ್ಷ ಇರ್ತೀರಾ? ಎಂದು ಸಿಎಂ ಸಿದ್ದರಾಮಯ್ಯಗೆ ಮಾಧ್ಯಮದವರು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಸಿಎಂ ಸಿದ್ದರಾಮಯ್ಯ, ಇದು ಮಾಧ್ಯಮ ಸೃಷ್ಟಿ ಎಂದು ಹೇಳಿ ಜಾರಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ