/newsfirstlive-kannada/media/post_attachments/wp-content/uploads/2025/04/bjp-worker.jpg)
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (39) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ.
ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗೆ 4.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿನಯ್​ಗೆ ಮದುವೆ ಆಗಿತ್ತು, ಒಂದು ಮಗು ಕೂಡ ಇದೆ.
ಇದನ್ನೂ ಓದಿ:ವಿನಯ್ ಗೌಡ, ರಜತ್ ಪ್ರಕರಣ ಬೆನ್ನಲ್ಲೇ ಮತ್ತೊಂದು ಹುಚ್ಚಾಟ.. ಹೆಂಡ್ತಿಯನ್ನೇ ಅಡವಿಟ್ಟು ಜೂಜಾಡುವ ರೀಲ್ಸ್..!
ಹಲವು ಅನುಮಾನ
ವಿನಯ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಶುರುವಾಗಿವೆ. ವಿನಯ್ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್​ಆ್ಯಪ್​ ಗ್ರೂಪ್​ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್​ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್​ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us