/newsfirstlive-kannada/media/post_attachments/wp-content/uploads/2025/07/TMK_BJP_LEADER_HEAR_ATTACK.jpg)
ತುಮಕೂರು: ರಾಜ್ಯದಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ತುಮಕೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡರೊಬ್ಬರು ನಿಧನರಾಗಿದ್ದಾರೆ.
ಬಿಜೆಪಿ ಯುವ ಮೋರ್ಚಾದ ಮುಖಂಡ ಹೆಬ್ಬಾಕ ನೀಲಕಂಠಸ್ವಾಮಿ (36) ನಿಧನ ಹೊಂದಿದವರು. ಇವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳಿದ ತಕ್ಷಣ ಎದೆ ನೋವು ಕಾಣಿಸಿಕೊಂಡಿತ್ತು. ತುಮಕೂರಿನ ಕುವೆಂಪು ನಗರದಲ್ಲಿ ಹೃದಯಾಘಾತದಿಂದ ತಲೆ ಸುತ್ತು ಬಂದು ಬಿದ್ದಿದ್ದರು. ಕೂಡಲೇ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಕೂಡ ಪಡೆಯುತ್ತಿದ್ದರು.
ಇದನ್ನೂ ಓದಿ: ಶಿವಮೊಗ್ಗ; ಪದವಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ
/newsfirstlive-kannada/media/post_attachments/wp-content/uploads/2025/07/TMK_BJP_LEADER.jpg)
ಆದರೆ ಚಿಕಿತ್ಸೆ ಫಲಿಸದೇ ಹೆಬ್ಬಾಕ ನೀಲಕಂಠಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಾಸನ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ತುಮಕೂರಿನಲ್ಲೂ ಹಾರ್ಟ್​​ ಅಟ್ಯಾಕ್​​ಗೆ ಬಿಜೆಪಿ ಯುವ ಮೋರ್ಚಾದ ಮುಖಂಡ ನಿಧನರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us