newsfirstkannada.com

VIDEO: ಇದೇನ್ ರಾವಣ ರಾಜ್ಯನಾ? ಡಿಕೆ ಬ್ರದರ್ಸ್‌ ವಿರುದ್ಧ ರೊಚ್ಚಿಗೆದ್ದ BJP ಯುವ ಮೋರ್ಚಾ ಕಾರ್ಯಕರ್ತರು

Share :

Published February 4, 2024 at 12:40pm

Update February 4, 2024 at 12:41pm

    ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಮನೆಗೆ ಮುತ್ತಿಗೆ ಹಾಕುವ ಯತ್ನ

    ಕರ್ನಾಟಕದಲ್ಲಿ ರಾವಣ ರಾಜ್ಯ ಅಸ್ಥಿತ್ವದಲ್ಲಿ ಇದ್ಯಾ ಎಂದು ಆಕ್ರೋಶ

    ನಾನು ಬಿಜೆಪಿ ಪ್ರತಿಭಟನೆಯನ್ನು ಸ್ವಾಗತ ಮಾಡ್ತೀನಿ ಎಂದ ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನುಗ್ಗಲು ಯತ್ನಸಿದ್ದು ಪೊಲೀಸರು ತಡೆದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅವರ ಮನೆಗೆ ಮುತ್ತಿಗೆ ಹಾಕೋ ಯತ್ನ ನಡೆಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪೊಲೀಸರು ಪ್ರತಿಭಟನಾ ನಿರತರನ್ನು ಬಲವಂತವಾಗಿ ತಡೆಯುವಾಗ ದರ್ಪ ಮೆರೆದಿರುವ ಆರೋಪ ಕೇಳಿಬಂದಿದೆ. ಕರ್ನಾಟಕದಲ್ಲಿ ರಾವಣ ರಾಜ್ಯ ಅಸ್ಥಿತ್ವದಲ್ಲಿ ಇದ್ಯಾ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಯುವ ಮುಖಂಡರಾದ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ ಹಲವಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ‘ಸಂಸದರು ಜವಾಬ್ದಾರಿ ಅರಿತು ಮಾತನಾಡಬೇಕು’- ಡಿಕೆ ಸುರೇಶ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಆಕ್ರೋಶ

‘ಬಿಜೆಪಿ ಹೋರಾಟಕ್ಕೆ ಸಂಪೂರ್ಣ ಸಹಕಾರ’
ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯನ್ನು ಸಂಸದ ಡಿ.ಕೆ ಸುರೇಶ್ ಅವರು ಸ್ವಾಗತ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಇದೆ. ಯಾರನ್ನ ತಡೆಯಲು ಸಾಧ್ಯವಿಲ್ಲ. ಬಿಜೆಪಿ ಹೋರಾಟಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ಕೊಡುತ್ತೆ. ನಾನು ಬಿಜೆಪಿ ಪ್ರತಿಭಟನೆಯನ್ನು ಸ್ವಾಗತ ಮಾಡ್ತೀನಿ. ದೇವರು ಬಿಜೆಪಿಗೆ ಒಳ್ಳೆಯದು ಮಾಡಲಿ ಎಂದರು.

ಇನ್ನು, ಬಿಜೆಪಿಯವರು ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಈ ದೇಶ ವಿಭಜನೆ ಆಗಬೇಕು ಅಂತ ನಾನು ಹೇಳಿಲ್ಲ. ಅವರು ವಿಭಜನೆ ವಿಚಾರದಲ್ಲಿ ಹೋಗ್ತಾ ಇದ್ದಾರೆ. ಬೇರೆ ರಾಜಕಾರಣ ಮಾಡ್ತಾ ಇದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡೋದು ಹಕ್ಕು. ಹಾಗಾಗಿ ಅವರು ಹೋರಾಟ ಮಾಡ್ತಾ ಇದ್ದಾರೆ ಮಾಡಲಿ. ನನ್ನ ಹೇಳಿಕೆ ಬಹಳ ಸ್ಪಷ್ಟವಾಗಿದೆ. ಹೇಳಿಕೆಯನ್ನ ತಿರುಚ್ಚುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಹಾಗಾಗಿ ಉತ್ತರ ಕೊಡುವ ಅವಶ್ಯಕತೆಯಿಲ್ಲ. ಅವರ ಹೋರಾಟಕ್ಕೆ ಯಶಸ್ಸು ಸಿಗಲಿ. ಅವರವರ ಭಾವನೆ ಹೇಳಲು ಎಲ್ಲರಿಗೂ ಹಕ್ಕಿದೆ. ಹೇಳಿಕೆ ತಿರುಚಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಡಿ.ಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಇದೇನ್ ರಾವಣ ರಾಜ್ಯನಾ? ಡಿಕೆ ಬ್ರದರ್ಸ್‌ ವಿರುದ್ಧ ರೊಚ್ಚಿಗೆದ್ದ BJP ಯುವ ಮೋರ್ಚಾ ಕಾರ್ಯಕರ್ತರು

https://newsfirstlive.com/wp-content/uploads/2024/02/Bjp-Protest-On-Dk-suresh.jpg

Load More