newsfirstkannada.com

ಪಾಕ್ ಶತ್ರು ರಾಷ್ಟ್ರ ಅಲ್ಲ.. ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಸದನದಲ್ಲೇ ವಿವಾದಾತ್ಮಕ ಹೇಳಿಕೆ

Share :

Published February 28, 2024 at 8:44pm

    ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ನೇರ ಸವಾಲು

    ಮೊಹಮ್ಮದ್ ಅಲಿ ಜಿನ್ನಾ ಸಮಾಧಿ ಬಳಿ ಕಣ್ಣೀರು ಸುರಿಸಿದವರು ಯಾರು?

    ಮೋದಿ ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ?

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ. ಈ ವಿವಾದ ಬಿಸಿಯಾಗಿರುವಾಗಲೇ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧಾನಪರಿಷತ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ನಮಗೆ ಶತ್ರು ರಾಷ್ಟ್ರ ಅಲ್ಲ. ಅದು ನಮಗೆ ಪಕ್ಕದಲ್ಲಿರುವ ರಾಷ್ಟ್ರ ಎಂಬ ಹೇಳಿಕೆ ನೀಡಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತಿದ್ದಾರೆ. ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ವಾಕ್ಸಮರಕ್ಕೆ ಉತ್ತರಿಸಿದ ಬಿ.ಕೆ ಹರಿಪ್ರಸಾದ್ ಅವರು, ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಅಲ್ಲ, ಪಕ್ಕದ ರಾಷ್ಟ್ರ ಅಷ್ಟೇ. ಇತ್ತೀಚೆಗೆ ಬಿಜೆಪಿ ನಾಯಕರು ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟಿದ್ದಾರೆ. ಅಡ್ವಾಣಿ ಅವರು ಮೊಹಮ್ಮದ್ ಅಲಿ ಜಿನ್ನಾಗೆ ಜಾತ್ಯಾತೀತ ನಾಯಕ ಎಂದು ಬಿರುದು ನೀಡಿ, ಸಮಾಧಿ ಎದುರು ಕಣ್ಣೀರು ಸುರಿಸಿದರು.

ಇದನ್ನೂ ಓದಿ: ಪಾಕ್​ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನ ಮಟ್ಟಹಾಕುತ್ತೇವೆ- CM ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು, ಪಾಕಿಸ್ತಾನದ ಪ್ರಧಾನಿಯ ಮೊಮ್ಮಗಳ ಮದುವೆಗೆ ಆಹ್ವಾನವೇ ಇಲ್ಲದೆ, ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ? ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಕೊಡುಗೆ ಇಲ್ಲದ ಬಿಜೆಪಿಯವರು, ನಮಗೆ ಸರ್ಟಿಫಿಕೇಟ್ ಕೊಡುತ್ತಿದ್ದಾರೆ. ಬಿಜೆಪಿಯವರು ನಮಗೆ ದೇಶದ್ರೋಹಿಗಳು, ದೇಶಪ್ರೇಮಿಗಳು ಅಂತಾ ಹೇಳುತ್ತಿದ್ದಾರೆ ಎಂದು ಹೇಳಿದರು. ಹರಿಪ್ರಸಾದ್‌ ಮಾತಿಗೆ ವಿಪಕ್ಷ ನಾಯಕ ಶ್ರೀನಿವಾಸ್ ಪೂಜಾರಿ, ಬಿಜೆಪಿ ಸದಸ್ಯ ರವಿಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಶತೃರಾಷ್ಟ್ರ’ ಘೋಷಣೆಗೆ ಹರಿಪ್ರಸಾದ್ ಸವಾಲು
ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರು ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ,ವೇಷ ಇದ್ದರೆ ಶತೃರಾಷ್ಟ್ರ ಎಂದು ಘೋಷಿಸಲಿ ಎಂದು ನೇರ ಸವಾಲು ಹಾಕಿದ್ದಾರೆ.

ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮಂಡಿಸಿದ್ದ ಖಾಸಗಿ ಮಸೂದೆಯನ್ನು ವಾಪಾಸ್ ಪಡೆದಿದ್ದು ಯಾಕೆ? 56 ಇಂಚಿನ ಎದೆಯಲ್ಲಿ ದೈರ್ಯವೇ ಇರಲಿಲ್ವೇ? ಯಾರ ಒತ್ತಡದಿಂದ ಮಸೂದೆ ವಾಪಾಸ್ ಪಡೆಯಲಾಯಿತು?

ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲಾ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದ್ಯಾ? ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ. ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಾಕ್ ಶತ್ರು ರಾಷ್ಟ್ರ ಅಲ್ಲ.. ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಸದನದಲ್ಲೇ ವಿವಾದಾತ್ಮಕ ಹೇಳಿಕೆ

https://newsfirstlive.com/wp-content/uploads/2024/02/Hariprasad-on-BJP.jpg

Load More