newsfirstkannada.com

ಬೆಂಗಳೂರು: ಬೆಳ್ಳಂಬೆಳಗ್ಗೆ ಇಬ್ಬರನ್ನು ಬಲಿ ತೆಗೆದುಕೊಂಡ BMTC ಬಸ್​

Share :

29-10-2023

    ರಸ್ತೆ ದಾಟುವಾಗ ಮಹಿಳೆಗೆ ಡಿಕ್ಕಿ ಹೊಡೆದ ಬಸ್​

    BMTC ಬಸ್​ ಅಪಘಾತಕ್ಕೆ ಬೈಕ್​ ಸವಾರ ಬಲಿ

    ವಿಜಯನಗರ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಬೆಂಗಳೂರು: ಬೆಳ್ಳಂ ಬೆಳಗ್ಗೆಯೇ ಬಿಎಂಟಿಸಿ ಬಸ್​ಗೆ ಇಬ್ಬರು ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗೆ ಬಿಎಂಟಿಸಿಗೆ ಮಹಿಳೆಯೊಬ್ಬರು ಬಲಿಯಾಗಿದ್ದರು. ಇದಾಗ ಬಳಿಕ ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ವೀಣಾ ಎಂಬವರು ಬಸ್​ನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರಸ್ತೆ ದಾಟುವಾಗ ಮಹಿಳೆಗೆ ಬಸ್​ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇದಾಗ ಬಳಿಕ ವಿಜಯ ನಗರದಲ್ಲೂ ಅಪಘಾತವೊಂದು ಸಂಭವಿಸಿದೆ.

ಗೋವಿಂದರಾಜನಗರದ ಬೈ ಟು ಕಾಫಿ ಮುಂಭಾಗ  ಕುಮಾರ್ (45) ಎಂಬಾತ ಬಿಎಂಟಿಸಿ ಬಸ್ ಅಪಘಾತಕ್ಕೆ ಬೈಕ್ ಸವಾರ ಬಲಿಯಾಗಿದ್ದಾನೆ. ವಿಜಯನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು: ಬೆಳ್ಳಂಬೆಳಗ್ಗೆ ಇಬ್ಬರನ್ನು ಬಲಿ ತೆಗೆದುಕೊಂಡ BMTC ಬಸ್​

https://newsfirstlive.com/wp-content/uploads/2023/10/BMTC-3.jpg

Load More