/newsfirstlive-kannada/media/post_attachments/wp-content/uploads/2025/06/Bus-accidentr.jpg)
ಬೆಂಗಳೂರು: ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಅಭಿಮಾನಿಗಳಿಗೆ RCB ಅಂದ್ರೆ ಜೀವ.. ಫ್ರಾಂಚೈಸಿ ಮಾಲೀಕರಿಗೆ ಫ್ಯಾನ್ಸ್ ಅಂದ್ರೆ ಜಸ್ಟ್ ಬ್ಯುಸಿನೆಸ್..!
15ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಬಸ್ ಡ್ರೈವರ್, ಕಂಡಕ್ಟರ್ ಸೇರಿ ಬಸ್ನಲ್ಲಿದ್ದ 15 ಪ್ರಯಾಣಿಕರಿಗೆ ಗಾಯಗಳಾಗಿವೆ.
ಡಿಕ್ಕಿ ಹೊಡೆದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ಮೈಸೂರು ರಸ್ತೆಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ