/newsfirstlive-kannada/media/post_attachments/wp-content/uploads/2024/05/bmtc1.jpg)
ಶಕ್ತಿ ಯೋಜನೆ ಯಶಸ್ವಿ ನಂತರ ಶಕ್ತಿಗೆ ಮತ್ತಷ್ಟು ಶಕ್ತಿ ಕೊಡೋಕೆ ಕಾಂಗ್ರೆಸ್ ಸರ್ಕಾರ ಹೊಸ ಎಲೆಕ್ಟ್ರಿಕ್ ಬಸ್ಗಳನ್ನೇ ಹೆಚ್ಚಾಗಿ ರೋಡಿಗಿಳಿಸಿದೆ. ಜೊತೆಗೆ ಸಿಟಿಯಲ್ಲಿ ಆಗ್ತಿರೋ ವಾಯು ಮಾಲಿನ್ಯ ನಿಯಂತ್ರಣಕ್ಕೂ BMTC 600ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಗಳನ್ನು ರಸ್ತೆಗೆ ಇಳಿಸಿದೆ. ಈ ಬಸ್ಗಳಿಗೆ ಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಪಶು ವೈದ್ಯರು ಕೊಟ್ಟ ಗುದ್ದಿಗೆ ಜ್ವರದಿಂದ ಬಳಲ್ತಿದ್ದ ವ್ಯಕ್ತಿ ಸಾವು ಆರೋಪ.. ಸಾವು ತಂದ ಆತ್ಮೀಯತೆ..!
ಆದರೆ, ಇದೀಗ ಇದೇ ಬಸ್ ಚಾಲಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಸರಿಯಾಗಿ ವೇತನ ಸಿಕ್ತಿಲ್ಲ ಅಂತ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಬಿಎಂಟಿಸಿಯಲ್ಲಿ ಒಟ್ಟು 6,842 ಬಸ್ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್ಗಳಿದ್ದರೆ, 600ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್ ಬಸ್ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ದಾರೆ.
ಬಿಎಂಟಿಸಿಯ ಚಾಲಕರಿಗೆ ತಿಂಗಳಿಗೆ 35 ರಿಂದ 40 ಸಾವಿರ ರೂಪಾಯಿ ಸಂಬಳ ನೀಡಿದರೆ, ಖಾಸಗಿ ಕಂಪನಿಗಳು ಎಲೆಕ್ಟ್ರಿಕ್ ಬಸ್ ಡ್ರೈವರ್ಗಳಿಗೆ 15 ರಿಂದ 18 ಸಾವಿರ ರೂಪಾಯಿ ಸಂಬಳ ನೀಡುತ್ತಿವೆ ಅನ್ನೋದು ಇವರ ಆರೋಪ. ಕೇವಲ 18 ಸಾವಿರವಷ್ಟೇ ಸಂಬಳ ಬರುತ್ತಂತೆ. ಅದು ಕೂಡ ಸರಿಯಾಗಿ ನೀಡುತ್ತಿಲ್ಲ ತಾರತಮ್ಯ ಆಗ್ತಿದೆ ಅನ್ನೋದು ಚಾಲಕರ ಆರೋಪ. ಈ ಬಗ್ಗೆ ಅಧಿಕಾರಿಗಳು ಅದ್ಯಾವ ನಿರ್ಧಾರ ತೆಗೆದುಕೊಳ್ತಾರೋ ಕಾದು ನೋಡಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ