newsfirstkannada.com

ನಾಳೆ ಬೆಂಗಳೂರು ಬಂದ್​​.. ಪ್ರಯಾಣಿಕರಿಗೆ ಗುಡ್​ನ್ಯೂಸ್​ ಕೊಟ್ಟ ಬಿಎಂಟಿಸಿ; ಓದಲೇಬೇಕಾದ ಸ್ಟೋರಿ!

Share :

10-09-2023

    ಗ್ಯಾರಂಟಿಗಳಿಂದ ಖಾಸಗಿ ವಾಹನಗಳ ಮಾಲೀಕರಿಗೆ ಹೊಡೆತ

    ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಸಾರಿಗೆ ಒಕ್ಕೂಟ

    ಇಂದು ಮಧ್ಯರಾತ್ರಿಯಿಂದಲೇ ಬೀದಿಗಿಳಿಯಲ್ಲ ಆಟೋ, ಕ್ಯಾಬ್​ಗಳು!

ಬೆಂಗಳೂರು: ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ ಹೀಗೆ ಗ್ಯಾರಂಟಿಗಳ ಮೇಲೆ ಗ್ಯಾರಂಟಿ ಘೋಷಿಸಿ ಅಧಿಕಾರ ಹಿಡಿದಿರೋ ಕಾಂಗ್ರೆಸ್‌ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳಿಂದಲೇ ಹೊಡೆತ ಬೀಳ್ತಿದೀಯಾ ಎಂಬ ಅನುಮಾನ ಶುರುವಾಗಿದೆ. ಶಕ್ತಿ ಯೋಜನೆಯಿಂದ ಖಾಸಗಿ ಬಸ್‌ನ ಕೇಳೋರಿಲ್ಲ. ಎಷ್ಟೇ ಹೊತ್ತು ಆದ್ರೂ ಸರಿ ಸರ್ಕಾರಿ ಬಸ್‌ಗೆ ಹೋಗ್ತೀವಿ ಅನ್ನೋ ಮಾತು ಕೇಳಿಬರ್ತಿದೆ. ಹೀಗಾಗಿ ಖಾಸಗಿ ಸಾರಿಗೆ ಸಂಸ್ಥೆಗಳಿಗೆ ಅದೆಷ್ಟೋ ಹೊಡೆತ ಬಿದ್ದಿದೆ. ಇಷ್ಟು ದಿನ ಸುಮ್ಮನಿದ್ದ ಖಾಸಗಿ ಸಾರಿಗೆ ಒಕ್ಕೂಟ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದೆ.

ಶಕ್ತಿ ಯೋಜನೆ ಎಫೆಕ್ಟ್‌ನಿಂದಾಗಿ ನಷ್ಟದತ್ತ ಸಾಗ್ತಿರೋ ಖಾಸಗಿ ಸಾರಿಗೆ ಒಕ್ಕೂಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟು ಸೋಮವಾರ ಬಂದ್‌ಗೆ ಕರೆಕೊಟ್ಟಿವೆ. ಇಂದು ಮಧ್ಯರಾತ್ರಿ 12ಗಂಟೆಯಿಂದಲೇ ಯಾವುದೇ ಖಾಸಗಿ ವಾಹನಗಳು ಕೂಡ ರಸ್ತೆಗಿಳಿಯಲ್ಲ. ಸುಮಾರು 30ಕ್ಕೂ ಹೆಚ್ಚು ಸಂಘಟನೆಯಡಿ 7 ಲಕ್ಷಕ್ಕೂ ಹೆಚ್ಚು ವಾಹನಗಳ ಸಂಚಾರ ಬಂದ್ ಆಗಲಿದೆ. ಖಾಸಗಿ ಸಾರಿಗೆ ಬಂದ್ ಹಿನ್ನೆಲೆ ಬಿಎಂಟಿಸಿಯಿಂದ ನಾಳೆ 500 ಹೆಚ್ಚುವರಿ ಬಸ್​ಗಳು ರಸ್ತೆಗೆ ಇಳಿಯಲಿವೆ.

ಹೆಚ್ಚುವರಿಯಾಗಿ 4000 ಟ್ರಿಪ್​ಗಳ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್​ ಮಾರ್ಕೆಟ್​​ ಹಾಗೂ ಶಿವಾಜಿನಗರ ಬಸ್ ​ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ, ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ ಕಡೆ ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲೂ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ಬೆಂಗಳೂರು ಬಂದ್​​.. ಪ್ರಯಾಣಿಕರಿಗೆ ಗುಡ್​ನ್ಯೂಸ್​ ಕೊಟ್ಟ ಬಿಎಂಟಿಸಿ; ಓದಲೇಬೇಕಾದ ಸ್ಟೋರಿ!

https://newsfirstlive.com/wp-content/uploads/2023/06/BMTC-Bus-1.jpg

Load More