ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್; ಫೋಟೋ ಇಲ್ಲಿದೆ!

author-image
admin
Updated On
ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್; ಫೋಟೋ ಇಲ್ಲಿದೆ!
Advertisment
  • ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಟಿ ಕತ್ರಿನಾ ಕೈಫ್‌!
  • ಮಹಾಕುಂಭಮೇಳದ ಬಳಿಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಮೊರೆ
  • ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಿರುವ ಕೈಫ್ ಕುಟುಂಬ

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಕತ್ರಿನಾ ಕೈಫ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

publive-image

ಮಾಸ್ಕ್ ಹಾಕಿಕೊಂಡು, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದ ಕತ್ರಿನಾ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

publive-image

ಪ್ರಮುಖವಾಗಿ ಕತ್ರಿನಾ ಕೈಫ್ ಅವರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಾಗದೋಷ ಹಾಗೂ ಸಂಕಷ್ಟಗಳ ಪರಿಹಾರದ ಹಿನ್ನೆಲೆಯಲ್ಲಿ ಕತ್ರಿನಾ ಕೈಫ್ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಡಿವೋರ್ಸ್ ವದಂತಿಗೆ ಬಿಗ್ ಟ್ವಿಸ್ಟ್ ಕೊಟ್ಟ ಧನಶ್ರೀ ವರ್ಮಾ; ಚಹಾಲ್ ಜೊತೆಗಿನ ಕ್ಷಣಗಳು ರಿಸ್ಟೋರ್​..! 

publive-image

ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment