6 ಅಂತಸ್ತಿನ ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ; ಆಗಿದ್ದೇನು?

author-image
admin
Updated On
6 ಅಂತಸ್ತಿನ ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ; ಆಗಿದ್ದೇನು?
Advertisment
  • ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಸಾವಿಗೆ ಶರಣು
  • ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿರುವ ಅನಿಲ್ ಅರೋರಾ
  • ಮುಂಬೈನ ಕ್ರೈಮ್‌ ಬ್ರಾಂಚ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿರುವ ಅನಿಲ್ ಅರೋರಾ ಪ್ರಾಣ ಬಿಟ್ಟಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ನಾಳೆಯೇ ಸಿನಿಮಾ ರಿಲೀಸ್ ಆಗಬೇಕಿತ್ತು.. ಖುಷಿಯಲ್ಲಿದ್ದ ಹೀರೋ ಕಿರಣ್ ರಾಜ್​ಗೆ ಅಪಘಾತ, ಹೇಗಿದೆ ಆರೋಗ್ಯ..? 

ಮುಂಬೈನಲ್ಲಿರುವ ಮನೆಯ ಟೆರೇಸ್‌ ಮೇಲೆ ತೆರಳಿರುವ ಅನಿಲ್‌ ಅರೋರಾ ಅವರು ಕೆಳಗೆ ಜಂಪ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮುಂಬೈನ ಕ್ರೈಮ್‌ ಬ್ರಾಂಚ್‌ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.

publive-image

ಮುಂಬೈನ ಬಾಂದ್ರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅರೋರಾ ಅವರು ತಮ್ಮ 6 ಅಂತಸ್ತಿನ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಲೈಕಾ ಅರೋರಾ ಹಾಟ್‌ & ವರ್ಕೌಟ್​ ವಿಡಿಯೋ ವೈರಲ್; ಈ ಬ್ಯೂಟಿ ವಯಸ್ಸೆಷ್ಟು? 

publive-image

ಅನಿಲ್‌ ಅರೋರಾ ಸಾವಿಗೆ ಕಾರಣವೇನು?
ಮಲೈಕಾ ಅರೋರ ತಂದೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅನಿಲ್ ಅರೋರಾ ಅವರು ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್ ಡಿವೋರ್ಸ್ ಪಡೆದಿದ್ದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ಆರೋರಾ ಅವರು ಸಾವಿಗೆ ಶರಣಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment