newsfirstkannada.com

ಗ್ಯಾರಂಟಿ ಯೋಜನೆಗಾಗಿ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದು ನಿಜನಾ? ಸರ್ಕಾರ ಮಾಡಿದ್ದೇನು?

Share :

Published February 21, 2024 at 12:56pm

Update February 21, 2024 at 12:59pm

    ಸಿದ್ಧಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ‌

    ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಸರ್ಕಾರ ಬಡವಾಯ್ತಾ?

    ಕೂಡಲೇ ಎಚ್ಚೆತ್ತುಕೊಂಡ ಸರ್ಕಾರದಿಂದ ಮಹತ್ವದ ಆದೇಶ

ತುಮಕೂರು: ಸಿದ್ಧಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ‌ ಪಡೆದಿದ್ದ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳನ್ನ ಕೊಟ್ಟು, ಕೊಟ್ಟು ರಾಜ್ಯ ಸರ್ಕಾರ ಬಡವಾಯ್ತಾ ಅನ್ನೋ ಆರೋಪ ಕೇಳಿ ಬಂದಿತ್ತು. ಈ ಸುದ್ದಿ ಪ್ರಸಾರವಾದ ಬೆನ್ನಲ್ಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಲೆದಂಡವಾಗಿದೆ.

ಬಿಸಿಎಂ ಹಾಸ್ಟೆಲ್‌ಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆ ಆಗಿದೆ. ಆದರೂ ಹಾಸ್ಟೆಲ್‌ಗಳಿಗೆ ಅಕ್ಕಿಯನ್ನ ಎತ್ತುವಳಿ ಮಾಡಲು ಹಿಂದೇಟು ಹಾಕಲಾಗಿದೆ. ಹೀಗಾಗಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಸುದ್ದಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರ ಹೋರಾಟಕ್ಕೆ ಅಸ್ತ್ರವಾಗುವ ಸಾಧ್ಯತೆ ಇತ್ತು. ಹೀಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ ದಯಾನಂದ ಅವರು ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಈ ಆದೇಶ ಹೊರಡಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗ್ಯಾರಂಟಿ ಯೋಜನೆಗಾಗಿ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದು ನಿಜನಾ? ಸರ್ಕಾರ ಮಾಡಿದ್ದೇನು?

https://newsfirstlive.com/wp-content/uploads/2024/02/Siddaganga-Mutt.jpg

Load More