/newsfirstlive-kannada/media/post_attachments/wp-content/uploads/2024/06/CBL-BOY.jpg)
ಚಿಕ್ಕಬಳ್ಳಾಪುರ: ಮೂರು ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೌತಮ್ (3) ಸ್ವತಃ ಚಿಕ್ಕಪ್ಪನಿಂದಲೇ ಕೊಲೆಯಾದ ಬಾಲಕ.
ಬಾಲಕನ ಚಿಕ್ಕಪ್ಪ ರಂಜಿತ್​ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ರಂಜಿತ್ ಕಾಡಿನಲ್ಲಿ ಅವಿತುಕೊಂಡಿದ್ದ. ರಾತ್ರಿಯಿಡೀ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಶಿರಿಷಾ ಹಾಗೂ ಮಂಜುನಾಥ್ ದಂಪತಿಗಳ ಪುತ್ರ ಮೂರು ವರ್ಷದ ಗೌತಮ್​​ನನ್ನು ಪಾಳುಬಿದ್ದ ಮನೆಗೆ ಕರೆದೊಯ್ದು ಕತ್ತು ಸೀಳಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಆರೋಪಿ ರಂಜಿತ್ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಆರೋಪಿ ವಿರುದ್ಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ