ಪೊದೆಯಲ್ಲಿ ಯುವತಿಯ ಬರ್ಬರ ಹತ್ಯೆ.. ಅತ್ಯಂತ ಹೇಯ ಕೃತ್ಯಕ್ಕೆ ಬೆಚ್ಚಿ ಬಿದ್ದ ಪೊಲೀಸರು; ಆಗಿದ್ದೇನು?

author-image
Veena Gangani
Updated On
ಪೊದೆಯಲ್ಲಿ ಯುವತಿಯ ಬರ್ಬರ ಹತ್ಯೆ.. ಅತ್ಯಂತ ಹೇಯ ಕೃತ್ಯಕ್ಕೆ ಬೆಚ್ಚಿ ಬಿದ್ದ ಪೊಲೀಸರು; ಆಗಿದ್ದೇನು?
Advertisment
  • ಯುವತಿ ಮೃತ ದೇಹದ ಮೇಲೆ ಅನೇಕ ಗಾಯದ ಗುರುತುಗಳು ಪತ್ತೆ
  • ಆರೋಪಿಗಳ ಪತ್ತೆಗಾಗಿ ಐದು ತಂಡಗಳನ್ನು ರಚಿಸಿದ ಪೊಲೀಸರು
  • ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಪೊದೆಯಲ್ಲಿ ಬಿಸಾಡಿರುವ ಹಂತಕರು

ಮುಂಬೈ: ಯುವತಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪೊದೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದ್ದು, ಅತ್ಯಂತ ಹೇಯ ಕೃತ್ಯ ಬೆಚ್ಚಿ ಬೀಳಿಸಿದೆ. ಯುವತಿಯ ಸಾವಿಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಯುವತಿಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಆಕೆಯನ್ನು ಕೊಂದಿರುವ ಹಂತಕ ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿ ಮೃತದೇಹವನ್ನುಎಸೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಲ್ಲದ ಬೆಕ್ಕು ಹೆಂಗಸರು.. ಕಮಲಾ ಹ್ಯಾರಿಸ್‌ಗೆ childless cat ಎಂದಿದ್ದೇಕೆ ಜೆ.ಡಿ ವ್ಯಾನ್ಸ್​​; ಏನಿದರ ಅರ್ಥ?

ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ (20) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರಿಗೆ ಕರೆ ಬಂದಿತ್ತು.

ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಅಧಿಕಾರಿಗಳು ಯುವತಿ ದೇಹದ ಮೇಲೆ ಅನೇಕ ಗಾಯದ ಗುರುತುಗಳನ್ನು ಪತ್ತೆ ಮಾಡಿದ್ದಾರೆ. ಯುವತಿಯನ್ನು ಅತ್ಯಂತ ಕ್ರೂರವಾಗಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಾಣದ ಹಂಗು ತೊರೆದು ಅಜ್ಜಿ ಜೀವ ಉಳಿಸಲು ನದಿಗೆ ಜಿಗಿದ KSRTC ಡ್ರೈವರ್; ಕೊನೆಗೆ ಏನಾಯ್ತು?

ಯುವತಿಯನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ಈ ಘಟನೆ ಸಂಬಂಧ ಮುಂಬೈ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಆರೋಪಿಗಳ ಪತ್ತೆಗಾಗಿ ಐದು ಪೊಲೀಸ್ ತಂಡಗಳು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment