/newsfirstlive-kannada/media/post_attachments/wp-content/uploads/2025/06/E-TUKARAM.jpg)
ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ಇ. ತುಕಾರಾಂ ಮನೆ ಮೇಲೆ ಇಡಿ ದಾಳಿ ಮಾಡಿದೆ. ಬಳ್ಳಾರಿ ಜಿಲ್ಲೆ ಸಂಡೂರಲ್ಲಿರುವ ಇ ತುಕಾರಾಂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತ ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್​ ಮನೆ ಮೇಲು ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
ಇತ್ತ ಕೂಡ್ಲಿಗಿ ಶಾಸಕ ಡಾ.ಎನ್.ಟಿ ಶ್ರೀನಿವಾಸ್ ಮನೆಯಲ್ಲೂ ED ಸರ್ಚಿಂಗ್ ನಡೆದಿದೆ. ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us