ದೀಪಗಳು, ಹೂವುಗಳಿಂದ ಅಲಂಕೃತಗೊಂಡ ಡೌನಿಂಗ್ ಸ್ಟ್ರೀಟ್!
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ಭಾಗಿ
ಲಂಡನ್ನ ಹಿಂದೂ ಸಮುದಾಯದ ಜೊತೆ ದೀಪಾವಳಿ ಆಚರಣೆ
ಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ಅವರು ಡೌನಿಂಗ್ ಸ್ಟ್ರೀಟ್‌ನಲ್ಲಿ ಆಯೋಜಿಸಲಾಗಿದ್ದ ಸಂಭ್ರಮದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ರಿಷಿ ಸುನಕ್ ಅವರು ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ. ಇದಕ್ಕಿಂತಲೂ ಹೆಚ್ಚಾಗಿ ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವದಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ ದೀಪಾವಳಿ ಹಬ್ಬಕ್ಕೆ ಮುಂಚಿತವಾಗಿ ಡೌನಿಂಗ್ ಸ್ಟ್ರೀಟ್ ಹಿಂದೂ ಸಮುದಾಯದವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ದೀಪಾವಳಿ ಹಬ್ಬದ ಸಂಕೇತವಾಗಿ ಪ್ರಧಾನಿ ನಿವಾಸ ಡೌನಿಂಗ್ ಸ್ಟ್ರೀಟ್‌ನಲ್ಲಿ ದೀಪಗಳು, ಹೂವುಗಳಿಂದ ಅಲಂಕರಿಸಲಾಗಿತ್ತು.
ಈ ದೀಪಾವಳಿ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಅವರು ಮತ್ತು ಪತ್ನಿ ಅಕ್ಷತಾ ಮೂರ್ತಿ ಅವರು ಬಹಳ ಸಂತೋಷದಿಂದ ದೀಪ ಹಚ್ಚಿದ್ದಾರೆ. ಈ ಕಲರ್‌ಫುಲ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇನ್ನೂ ವಿಶೇಷ ಎಂದರೆ ಭಾರತೀಯ ಮೂಲದ ಹಿಂದೂ ಸಮುದಾಯದವರ ಒಟ್ಟಿಗೆ ಪ್ರಧಾನಿ ರಿಷಿ ಸುನಕ್ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ X ಖಾತೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಇದು ಕತ್ತಲೆಯ ಮೇಲೆ ಬೆಳಕಿನ ವಿಜಯೋತ್ಸವದ ಆಚರಣೆಯಾಗಿದೆ. ಇಂಗ್ಲೆಂಡಿನಲ್ಲಿರುವ ಪ್ರತಿಯೊಬ್ಬರಿಗೂ ಮತ್ತು ಜಗತ್ತಿನ ಸುತ್ತಮುತ್ತ ಇರುವ ಪ್ರತಿಯೊಬ್ಬರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
Diwali 🪔 celebrated at 10 Downing Street by British PM Rishi Sunak & his wife Akshata Murty pic.twitter.com/iTrAwh1d9R
— Sidhant Sibal (@sidhant) November 8, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ