newsfirstkannada.com

ಮಾಜಿ ಸಿಎಂ BS ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

Share :

Published June 6, 2024 at 7:38am

Update June 6, 2024 at 7:53am

    ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು

    ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪರ ಇದ್ದರು

    ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ನಿಧನ

ಮೈಸೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪನವರ ಆಪ್ತ ಹಾಗೂ ಬಿಜೆಪಿ ಮುಖಂಡ ಕಾರ್ಯ ಗ್ರಾಮದ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲೇ ಕಾಪು ಸಿದ್ದಲಿಂಗಸ್ವಾಮಿ ಅವರು ನಿಧನರಾಗಿದ್ದಾರೆ.

ಇದನ್ನೂ ಓದಿ: ಟ್ರಕ್ಕಿಂಗ್​ಗೆ ಹೋದವರ ದುರಂತ ಅಂತ್ಯ.. 9 ಜನರ ಪೈಕಿ 4 ಮೃತದೇಹಗಳಿಗಾಗಿ ಮುಂದುವರೆದ ಶೋಧಕಾರ್ಯ

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪನವರ ಆಪ್ತರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಎಲೆಕ್ಷನ್​ನಲ್ಲಿ ಸಿಎಂ ಸಿದ್ದರಾಮಯ್ಯ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಸೋಮಣ್ಣ ಪರವಾಗಿ ಕಾಪು ಸಿದ್ದಲಿಂಗಸ್ವಾಮಿ ಕೆಲಸ ಮಾಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಿಎಂ BS ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

https://newsfirstlive.com/wp-content/uploads/2024/06/BSY_AIDE.jpg

Load More