ಇನ್ನೂ ಬಗೆಹರಿಯದ ವಿಪಕ್ಷ ನಾಯಕನ ಕಗ್ಗಂಟು
ಅಮಿತ್ ಶಾ, ಜೆಪಿ ನಡ್ಡಾ ಜತೆ ಮಹತ್ವದ ಮಾತುಕತೆ
ವಿಪಕ್ಷ ನಾಯಕನ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?
ದೆಹಲಿ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಳಿಕ ಮಾತಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ ಎಂದಿದ್ದಾರೆ.
ಈ ಸಂಬಂಧ ಮಾತಾಡಿದ ಬಿ.ಎಸ್ ಯಡಿಯೂರಪ್ಪ, ನಾಳೆ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ. ನಾನು ಅಮಿತ್ ಶಾ, ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯ ನೀಡಿದ್ದೇನೆ. ಅಗತ್ಯಬಿದ್ದರೆ ಮತ್ತೊಮ್ಮೆ ಬರಬೇಕು ಎಂದು ಕೇಳಿಕೊಂಡಿದ್ದಾರೆ ಎಂದರು.
ನಾಳೆ ಕೇಂದ್ರದಿಂದ ವಿನೋದ್ ತಾವಡೆ, ಮನ್ಸುಖ್ ಮಾಂಡವೀಯ ಎಂಬ ಇಬ್ಬರು ವೀಕ್ಷಕರು ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಇದನ್ನು ಕೇಂದ್ರದ ನಾಯಕರಿಗೆ ನೀಡಲಿದ್ದಾರೆ. ಶಾಸಕರ ಅಭಿಪ್ರಾಯದ ಆಧಾರದ ಮೇರೆಗೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ