newsfirstkannada.com

ಕರಾವಳಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್! 4,200 ಕೋಟಿ ರೂಪಾಯಿ ವೆಚ್ಚದಲ್ಲಿ 30 MTPA ಸರ್ವಋುತು ಬಂದರು 

Share :

Published February 16, 2024 at 11:39am

Update February 16, 2024 at 12:02pm

    ಸಾಗರ ಮಾಲಾ ಯೋಜನೆಯಡಿ ವ್ಯಾಪಾರಕ್ಕೆ ಆದ್ಯತೆ

    ಮಂಗಳೂರಿನ ನದಿಗಳಲ್ಲಿ ಜಲಮೆಟ್ರೋ ಸೇವೆ ನಿರ್ಮಾಣ

    3,048 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿಗೆ ಸರ್ಕಾರ ಚಿಂತನೆ

ಬಜೆಟ್​ನಲ್ಲಿ ಬಂದರು ಮತ್ತು ಒಳನಾಡಿನ ಅಭಿವೃದ್ಧಿಗೆ ಸರ್ಕಾರ ಚಿತ್ತಹರಿಸಿದೆ. ರಾಜ್ಯದ 320 ಕಿ.ಮೀಟರ್ ಉದ್ದದ ಕರಾವಳಿ ತೀರಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಮಂದಾಗಿದೆ. ಬಂದರು ಮತ್ತು ರೈಲುಗಳು ವಿಮಾನ ಸಂಪರ್ಕವನ್ನ ಸುಗಮಗೊಳಿಸಲು ಯೋಜನೆ ಹಾಕಿಕೊಂಡಿದೆ. ಹೀಗಾಗಿ ಕೆಲವು ವರ್ಷಗಳಲ್ಲಿ ಅಂದಾಜು 20 ಸಾವಿರ ಕೋಟಿ ಹೂಡಿಕೆ ಮಾಡುವ ಗುರಿಯನ್ನು ಸಿದ್ದರಾಮಯ್ಯ ಸರ್ಕಾರ ಹೊಂದಿದೆ.

2024-2025ನೇ ಸಾಲಿನ ಬಜೆಟ್​ನಲ್ಲಿ ಸಮುದ್ರ ಸಾರಿಗೆ, ಸರಕು ಸಾಗಣೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಒತ್ತು ನೀಡಿದೆ. ರಾಜ್ಯದ ಜಲ ಸಾರಿಗೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹೂಡಿಕೆ ಮಾಡಲು ಮುಂದಾಗಿದೆ. ಖಾಸಗಿ ಹೂಡಿಕೆಗಳನ್ನ ಆಕರ್ಷಿಸಲು ಕರ್ನಾಟಕ ಜಲಸಾರಿಗೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.

ಇನ್ನು ಸಾಗರ ಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಆದ್ಯತೆ ನೀಡಿದೆ. ಅಂದಾಜು 1,017 ಕೋಟಿ ವೆಚ್ಚದಲ್ಲಿ 26 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಇನ್ನೂ 1,145 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಯೋಜನಾ ವರದಿ ತಯಾರಿಸಿದೆ. 12 ಕಾಮಗಾರಿಗಳ ವರದಿಗಳನ್ನ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸರ್ವಋುತು ಬಂದರು ನಿರ್ಮಾಣ ಮಾಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ. 4,200 ಕೋಟಿ ವೆಚ್ಚದಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು ನಿರ್ಮಿಸುವುದಾಗಿ ಹೇಳಿದೆ. ಇದಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಎರಡನೇ ಬೃಹತ್ ಬಂದರು ನಿರ್ಮಾಣ. ಪಿಪಿಪಿ ಮಾದರಿಯಲ್ಲಿ ಅಂದಾಜು 3,048 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿ ಮಾಡಲು ಚಿಂತಿಸಿದೆ.

ಕಾರವಾರ, ಮಲ್ಪೆ, ಹಳೇ ಮಂಗಳೂರು ಬಂದರುಗಳಲ್ಲಿ 4 ಬರ್ತ್ ಅಭಿವೃದ್ಧಿ ಮಾಡುವುದಾಗಿ ತಿಳಿಸಿದೆ. ಕಾರವಾರ, ಹಳೇ ಮಂಗಳೂರು ಸೇರಿ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಮಾಡಲಿದೆ. ಉತ್ತರಕನ್ನಡದ ಮಂಕಿಯಲ್ಲಿ ವಿವಿದೋದ್ದೇಶ ಬಂದರು ಅಭಿವೃದ್ಧಿ ಬಗ್ಗೆ ಚಿಂತಿಸಿದೆ. ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆಗೆ ಕಾಮಗಾರಿ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಜಲಮೆಟ್ರೋ ಸೇವೆ

ಇನ್ನು ಹಳೇ ಮಂಗಳೂರು ಬಂದರಿನಲ್ಲಿ 350 ಮೀ ಉದ್ದದ ಕೋಸ್ಟರ್ ಬರ್ತ್‌ ನಿರ್ಮಾಣ ಮತ್ತು 2024-25ರಲ್ಲೇ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್‌ ಮತ್ತು ಬಂದರು ನಿರ್ಮಾಣ ಮಾಡಲಿದೆ. ಐಐಟಿ ಮದ್ರಾಸ್ ಸಹಯೋಗದೊಂದಿಗೆ ಪ್ರವಾಸೋದ್ಯಮ ಬಂದರು ಅಬಿವೃದ್ಧಿ ಮಾಡಲಿದೆ. ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆ ನಿರ್ಮಾಣ ಮಾಡುವುದಾಗಿ ಈ ಬಾರಿಯ ಬಜೆಟ್​ನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಪ್ರಗತಿ ಮೇಲ್ವಿಚಾರಣೆ, ಅಂತರ್ ಇಲಾಖಾ ತೊಡಕು ಬಗೆಹರಿಸಲು ಕ್ರಮವಹಿಸುವುದಾಗಿ ಸಿಎಂ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ತಿಳಿದಿದ್ದಾರೆ. ರಾಜ್ಯದಲ್ಲಿ ಮೂಲ ಸೌಕರ್ಯ ಯೋಜನೆಗಳ ಪ್ರಗತಿಗೆ ಪ್ರತ್ಯೇಕ ಘಟಕ ಸ್ಥಾಪಿಸುವುದಾಗಿ ಹೇಳಿದ್ದಾರೆ. ಜೊತೆಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕಗಳ ಸ್ಥಾಪಿಸಲಾಗುತ್ತದೆ ಎಂದು ಬಜೆಟ್​ನಲ್ಲಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರಾವಳಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್! 4,200 ಕೋಟಿ ರೂಪಾಯಿ ವೆಚ್ಚದಲ್ಲಿ 30 MTPA ಸರ್ವಋುತು ಬಂದರು 

https://newsfirstlive.com/wp-content/uploads/2024/02/Mangalore-Port.jpg

Load More