ಟೀಮ್ ಇಂಡಿಯಾ, ಬಾಂಗ್ಲಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯ
ಭಾರತ ಬ್ಯಾಟಿಂಗ್, ಬೌಲಿಂಗ್ ಎರಡು ವಿಭಾಗದಲ್ಲೂ ಅಮೋಘ ಪ್ರದರ್ಶನ
ಟೆಸ್ಟ್ ಮುಗಿಯುತ್ತಿದ್ದಂತೆ ಐಸಿಸಿ ಶ್ರೇಯಾಂಕದಲ್ಲಿ ಏರಿಕೆ ಕಂಡ ಭಾರತ ಆಟಗಾರರು
ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಈ ಮಹತ್ವದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಬ್ಯಾಟಿಂಗ್, ಬೌಲಿಂಗ್ ಎರಡು ವಿಭಾಗದಲ್ಲೂ ಅಮೋಘ ಪ್ರದರ್ಶನ ನೀಡಿರೋ ಟೀಮ್ ಇಂಡಿಯಾ ಆಟಗಾರರು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಏರಿಕೆ ಕಂಡಿದ್ದಾರೆ.
ಇತ್ತೀಚೆಗೆ ರಿಲೀಸ್ ಆಗಿರೋ ಐಸಿಸಿ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಬೌಲರ್ ಜಸ್ಪ್ರಿತ್ ಬುಮ್ರಾ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ. ಇವರು ಒಟ್ಟು 870 ಅಂಕಗಳ ಮೂಲಕ ಮೊದಲನೇ ಸ್ಥಾನದಲ್ಲಿದ್ದರೆ, 2ನೇ ಸ್ಥಾನದಲ್ಲಿ 869 ಅಂಕಗಳೊಂದಿಗೆ ಅಶ್ವಿನ್ ಇದ್ದಾರೆ.
ತಲಾ 11 ವಿಕೆಟ್ ಪಡೆದಿದ್ದ ಅಶ್ವಿನ್, ಬುಮ್ರಾ!
ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜಸ್ಪ್ರಿತ್ ಬುಮ್ರಾ ಹಾಗೂ ಆರ್. ಅಶ್ವಿನ್ ತಲಾ 11 ವಿಕೆಟ್ ಪಡೆದಿದ್ದರು. ಇಬ್ಬರೂ ಬಾಂಗ್ಲಾ ವಿರುದ್ಧದ ಅಮೋಘ ಪ್ರದರ್ಶನ ನೀಡಿದ್ರು. ಆದರೆ, ಬುಮ್ರಾಗೆ ಮಾತ್ರ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿದ್ದು, ಅಶ್ವಿನ್ ಕುಸಿತ ಕಂಡಿದ್ದಾರೆ.
ಜೈಸ್ವಾಲ್‌ಗೆ 3ನೇ ಸ್ಥಾನ
ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ 792 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಇಂಗ್ಲೆಂಡ್ ತಂಡದ ಜೋ ರೂಟ್ ನಂಬರ್ 1 ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ 2ನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: 4,4,4,4,4,4,4,4,4,4,4,4,4,4,4,4,4,4,4,4,4,4,4,4,4; ಭರ್ಜರಿ ದ್ವಿಶತಕ ಸಿಡಿಸಿ ದಾಖಲೆ ಬರೆದ ಭಾರತದ ಯುವ ಬ್ಯಾಟರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ