ಕ್ಯಾಪ್ಟನ್ ರೋಹಿತ್ ನೇತೃತ್ವದ ಟೀಂ ಇಂಡಿಯಾಗೆ ಗುಡ್ನ್ಯೂಸ್
6 ತಿಂಗಳ ಬಳಿಕ ಟೀಂ ಇಂಡಿಯಾಗೆ ಸ್ಟಾರ್ ಪ್ಲೇಯರ್ ಕಮ್ಬ್ಯಾಕ್
ಐರ್ಲೆಂಡ್ ವಿರುದ್ಧದ ಟಿ20 ಸೀರೀಸ್ಗೆ ಈ ಸ್ಟಾರ್ ಪ್ಲೇಯರ್ ಲಭ್ಯ!
ಟೀಂ ಇಂಡಿಯಾದ ಖ್ಯಾತ ಕ್ರಿಕೆಟರ್ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ. ಕಳೆದ ಆರು ತಿಂಗಳಿನಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ ಹಲವು ಸೀರಿಸ್ಗಳು ಆಡಲಿಲ್ಲ. ಇತ್ತೀಚೆಗೆ ಆಸೀಸ್ ತಂಡದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲೂ ಟೀಂ ಇಂಡಿಯಾ ಪರ ಆಡಿರಲಿಲ್ಲ ಬುಮ್ರಾ. ಜಸ್ಪ್ರೀತ್ ಬುಮ್ರಾ ಸ್ಥಾನವನ್ನು ಯಾರಿಂದಲೂ ತುಂಬಲಾಗಲಿಲ್ಲ. ಈ ಮಧ್ಯೆ ಟೀಂ ಇಂಡಿಯಾಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ.
ಯೆಸ್, ಇದೇ ಆಗಸ್ಟ್ ತಿಂಗಳಲ್ಲಿ ನಡೆಯೋ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡೋ ಸಾಧ್ಯತೆ ಇದೆ. ತೀವ್ರ ಬೆನ್ನುನೋವಿನ ಕಾರಣದಿಂದ ಅಲಭ್ಯರಾಗಿದ್ದ ಜಸ್ಪ್ರೀತ್ ಬುಮ್ರಾ ಈಗ ಫಿಟ್ನೆಸ್ನತ್ತ ವರ್ಕೌಟ್ ಮಾಡುತ್ತಿದ್ದು, ಸದ್ಯದಲ್ಲೇ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡುತ್ತಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಬುಮ್ರಾ ಈ ವರ್ಷ ನಡೆಯೋ ಐರ್ಲೆಂಡ್ ವಿರುದ್ಧದ ಸರಣಿಗೆ ಲಭ್ಯರಾಗಲಿದ್ದಾರೆ. ಇದಕ್ಕಾಗಿ ಅದ್ಭುತ ತಯಾರಿ ನಡೆಸುತ್ತಿದ್ದಾರೆ. ಇದು ಟೀಂ ಇಂಡಿಯಾಗೆ ಗುಡ್ನ್ಯೂಸ್ ಆಗಿದ್ದು, ಸುದೀರ್ಘ ಕಾಲದ ಬಳಿಕ ಬುಮ್ರಾ ತಂಡಕ್ಕೆ ಮರಳಲು ಉತ್ಸುಕರಾಗಿದ್ದಾರೆ ಎಂದು ಹಿರಿಯ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇನ್ನು, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಖುದ್ದು ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಬುಮ್ರಾ ಜತೆಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗ ಬುಮ್ರಾ ಫಿಟ್ ಆಗೋ ಸಾಧ್ಯತೆ ಇದೆ ಎಂದರು ಬಿಸಿಸಿಐ ಹಿರಿಯ ಅಧಿಕಾರಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ