/newsfirstlive-kannada/media/post_attachments/wp-content/uploads/2024/07/kalaburagi-1.jpg)
ಕಲಬುರಗಿ: ಮಹಿಳೆಯೊಬ್ಬಳ ಶವವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ಮೃತದೇಹ ಸಿಕ್ಕಿದೆ.
ಸುಟ್ಟ ಸ್ಥಿತಿಯಲ್ಲಿರುವ ಮಹಿಳೆಯ ಶವವನ್ನು ಬಸಮ್ಮ (45) ಎಂದು ಗುರುತಿಸಲಾಗಿದೆ. ಈಕೆ ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿ ಎಂದು ಗುರುತಿಸಲಾಗಿದೆ.
/newsfirstlive-kannada/media/post_attachments/wp-content/uploads/2024/07/kalaburagi-2.jpg)
ಇದನ್ನೂ ಓದಿ: ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ.. KRS​ ಡ್ಯಾಂನ ಒಳಹರಿವಿನಲ್ಲಿ ದಿಢೀರ್ ಏರಿಕೆ!
ಬಸಮ್ಮ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಸಾಕ್ಷಿ ನಾಶಪಡಿಸಲು ಮೃತದೇಹ ಸುಟ್ಟು ಹಾಕಿರುವ ಸಾಧ್ಯತೆಯಿದೆ.
ಇದನ್ನೂ ಓದಿ: ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
/newsfirstlive-kannada/media/post_attachments/wp-content/uploads/2024/07/kalaburagi-3.jpg)
ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ಶ್ರೀನಿವಾಸಲು ಆಗಮಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us