/newsfirstlive-kannada/media/post_attachments/wp-content/uploads/2023/09/accident-8.jpg)
ಚಿಕ್ಕಮಗಳೂರು: ಬಸ್ ನಿಲ್ದಾಣದ ಬಳಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದ ಘಟನೆ ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್​ನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಓವರ್ ಸ್ಪೀಡ್​ನಲ್ಲಿ ಬಂದು ಗುದ್ದಿದೆ. ಅಪಘಾತದಲ್ಲಿ ತುಳಸಿ (15) ಮೃತ ವಿದ್ಯಾರ್ಥಿನಿ. ನಿವೇದಿತ (14) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬೈಕ್​ ಮತ್ತು ಕಾರು ಮುಖಾಮುಖಿ ಡಿಕ್ಕಿ; ಮೂವರ ಸ್ಥಿತಿ ಚಿಂತಾಜನಕ
ಭೀಕರ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇನ್ನುಳಿದ ಐದು ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಬಸ್​ ಡಿಕ್ಕಿ ಹೊಡೆದ ರಬಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂಗೊಂಡಿದೆ.
ಅತಿ ವೇಗವಾಗಿ ಬಸ್​ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕುತ್ತಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿ ತುಳಸಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ