Advertisment

ಭೀಕರ ಅಪಘಾತ.. ಕಂದಕಕ್ಕೆ ಉರುಳಿದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​

author-image
Ganesh
Updated On
ಭೀಕರ ಅಪಘಾತ.. ಕಂದಕಕ್ಕೆ ಉರುಳಿದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​
Advertisment
  • ದುರ್ಘಟನೆಯಲ್ಲಿ ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು
  • ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ
  • ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರೀ ಅಪಘಾತ ಸಂಭವಿಸಿದೆ. ತಮಿಳುನಾಡಿನ ಯೆರ್ಕೇಡ್​​ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ 13ನೇ ಹೆಪಾರಿಯನ್ ತಿರುವಿನಲ್ಲಿ ನಡೆದಿದೆ.

Advertisment

ಇದನ್ನೂ ಓದಿ:ಅಭಿಮಾನಿಗಳಿಗೆ ಬಿಗ್ ಶಾಕ್.. ಪೊಲೀಸರ ಮುಂದೆ ಹಾಜರಾದ ರಶ್ಮಿಕಾ ಮಂದಣ್ಣ.. ಏನಾಯ್ತು..

ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ಪೊಲೀಸರಿಗೆ, ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ.

ದುರ್ಘಟನೆಯಲ್ಲಿ ಓರ್ವ ಬಾಲಕ ಸೇರಿ ಒಟ್ಟು ಐವರು ಪ್ರಯಾಣಿಕರು ಸಾವನ್ನಪ್ಪಿದ್ದರು. ದುರ್ಘಟನೆಯಲ್ಲಿ 45 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಅಪಘಾತದ ಸ್ಥಳಕ್ಕೆ ಸ್ಥಳೀಯರೊಂದಿಗೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Advertisment

ಇದನ್ನೂ ಓದಿ:ಕೊಹ್ಲಿ ಕಂಡ್ರೆ ಅದ್ಯಾಕೆ ಹಿಂಗೆ ಆಡ್ತಾರೋ ಜನ.. ಕಿಂಗ್ ಕೊಹ್ಲಿ ಉತ್ತರ ಮಾತ್ರ ಬೆಂಕಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment