/newsfirstlive-kannada/media/post_attachments/wp-content/uploads/2024/05/BUS-ACCIDENT-1-1.jpg)
ನಿಯಂತ್ರಣ ಕಳೆದುಕೊಂಡು ಬಸ್​ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಅಪಘಾತಕ್ಕೆ ಒಳಗಾಗಿದ್ದು, ಹೈದರಾಬಾದ್​ನಿಂದ ಅದೋನಿಗೆ ಬಸ್ ಪ್ರಯಾಣ ಮಾಡುತ್ತಿತ್ತು. ನಿಯಂತ್ರಣ ಕಳೆದುಕೊಂಡ ಬಸ್​ ಕುರ್ನೂಲ್ ಜಿಲ್ಲೆಯ ಕೊಡುಮುರ್ ಎಂಬಲ್ಲಿ ಪಲ್ಟಿಯಾಗಿದೆ.
ಅನಾಹುತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿಯನ್ನು, ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ:ಸೋತ ಆರ್​ಸಿಬಿ.. ನಾಯಕ ಫಾಫ್ ಡು ಪ್ಲೆಸ್ಸಿಸ್ ಹೇಳಿದ್ದೇನು..?
https://x.com/jsuryareddy/status/1793461925596348778
ಇದನ್ನೂ ಓದಿ:ಡಿನ್ನರ್ ಪಾರ್ಟಿ ಮೂಲಕ ರಣತಂತ್ರ ಹೆಣೆದ DK ಶಿವಕುಮಾರ್.. ಸಚಿವರಿಗೆ ಸಿದ್ದರಾಮಯ್ಯ ಕ್ಲಾಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us