/newsfirstlive-kannada/media/post_attachments/wp-content/uploads/2024/08/Bidar-1.jpg)
ಬೀದರ್: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದಾರೆ.
ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಬೆಳಗ್ಗೆ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ ಭೀಕರ ಅಪಘಾತ ನಡೆದಿದೆ. ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಅನಿತಾಬಾಯಿ(45) ಮತ್ತು ಆಕೆಯ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು, ಗಾಯಗೊಂಡವರು ಹೋನ್ನಕೇರಿ ತಾಂಡದ ನಿವಾಸಿಗಳು ಎನ್ನಲಾಗುತ್ತಿದೆ.
/newsfirstlive-kannada/media/post_attachments/wp-content/uploads/2024/08/Bidar-2.jpg)
ಇದನ್ನೂ ಓದಿ: ರಾಜಮನೆತನಕ್ಕೂ ಚಾಮುಂಡಿ ದೇವಾಲಯಕ್ಕೂ ಇರೋ ಸಂಬಂಧವೇನು? ದಾಖಲೆಗಳು ಏನು ಹೇಳ್ತಿವೆ?
ಬಸ್ ಬೀದರ್​ನಿಂದ ಮಹಾರಾಷ್ಟ್ರದ ಲಾತೂರ್​ಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಜನವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬಳಿಕ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಬೀದರ್- ಭಾಲ್ಕಿ ಮುಖ್ಯ ರಸ್ತೆ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಅತ್ತ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us