/newsfirstlive-kannada/media/post_attachments/wp-content/uploads/2024/07/Bus.jpg)
ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ. ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 27 ವರ್ಷದ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಸಣ್ಣ ಆಗಲು ಹೋಗಿ ಜೀವಂತ ಅಸ್ಥಿಪಂಜರವಾದ ಸುಂದರಿ.. ಹೆಣ್ಣುಮಕ್ಕಳು ಓದಲೇಬೇಕಾದ ಸ್ಟೋರಿ!
ಸಾವನ್ನಪ್ಪಿದ ದುರ್ದೈವಿಯನ್ನು ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದವನು ಎಂದು ಗುರುತಿಸಲಾಗಿದೆ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us