ಸರ್ಕಾರಿ ಬಸ್- ಪ್ರವಾಸಿಗರ ಕಾರಿನ ನಡುವೆ ಮುಖಮುಖಿ ಡಿಕ್ಕಿ
ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಭೀಕರ ದುರ್ಘಟನೆ
ಸಕಲೇಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ KSRTC ಬಸ್
ಚಿಕ್ಕಮಗಳೂರು: ಸರ್ಕಾರಿ ಬಸ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು.
ಮೃತ ತಾಯಿ ಮಗ ಮೂಲತಃ ಬೆಂಗಳೂರಿನ ಕೋಣನಕುಂಟೆ ನಿವಾಸಿಗಳು. ಶಿವಯಾಗಯ್ಯ ಹಿರೇಮಠ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಕೂಡಲೇ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೈ ಸಕಲೇಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೂಡಿಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ