newsfirstkannada.com

ಸರ್ಕಾರಿ ಬಸ್​​, ಲಾರಿ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು

Share :

21-06-2023

    ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

    ಚಾಲಕನ ನಿಯಂತ್ರಣ ತಪ್ಪಿ ಬಸ್​​ಗೆ ಡಿಕ್ಕಿ ಹೊಡೆದ ಲಾರಿ

    ಅಪಘಾತ ಸ್ಥಳದಲ್ಲೇ ಇಬ್ಬರು ಸಾವು, ಐವರ ಸ್ಥಿತಿ ಗಂಭೀರ

ವಿಜಯಪುರ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ತಾಲೂಕಿನ ಹಡಗಲಿ ಗ್ರಾಮದ ಬಳಿ ಸಂಭವಿಸಿದೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ.

ಸರ್ಕಾರಿ ಬಸ್​​ ಅಥಣಿಯಿಂದ ವಿಜಯಪುರ ಮಾರ್ಗವಾಗಿ ಗಾಣಗಾಪುರಕ್ಕೆ ಹೊರಟಿತ್ತು. ಲಾರಿಯು ಕಲಬುರಗಿಯಿಂದ ವಿಜಯಪುರದ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸರ್ಕಾರಿ ಬಸ್​​, ಲಾರಿ ನಡುವೆ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು

https://newsfirstlive.com/wp-content/uploads/2023/06/accident-3-1.jpg

Load More