/newsfirstlive-kannada/media/post_attachments/wp-content/uploads/2024/07/Truck-Accident-1.jpg)
ಡಬಲ್ ಡೆಕ್ಕರ್ ಬಸ್ ಮತ್ತು ಹಾಲಿನ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉತ್ತರ ಪ್ರದೇಶ ಉನ್ನಾವೊದಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ 18 ಜನರು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಬಸ್ ಬಿಹಾರದ ಸೀತಾರ್ಮಹಿಯಿಂದ ದೆಹಲಿ ಕಡೆ ತೆರಳುತ್ತಿತ್ತು. ಈ ವೇಳೆ ಗರ್ಹಾ ಗ್ರಾಮದ ಬಳಿ ಹಾಲಿನ ಟ್ಯಾಂಕರ್ಗೆ ಹಿಂದಿನಿಂದ ಹೋಗಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ವರುಣಾರ್ಭಟಕ್ಕೆ ಮುಂಬೈ, ಅಸ್ಸಾಂ ತತ್ತರ.. ಸಾಲು ಸಾಲು ಸಾವು ನೋವು
ಬಸ್ ಡಿಕ್ಕಿ ಹೊಡೆದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇನ್ನು ಕೆಲವರು ಬಸ್ನಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ.
ಅಪಘಾತ ನಡೆದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಂತ್ರಸ್ತರನ್ನು ಹೊರತೆಗೆದಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ
ಭೀಕರ ಅಪಘಾತಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ ‘‘ದುಃಖದಲ್ಲಿರುವ ಕುಟುಂಬಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಜಿಲ್ಲಾಧಿಕಾರಿಯೊಂದಿಗೆ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದೇನೆ’’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ.. ಡಿಕೆಶಿ ಲೆಕ್ಕಾಚಾರವೇನು? ಜನರು ಎಲ್ಲಾ ದಾಖಲೆಗಳನ್ನು ಬದಲಾವಣೆ ಮಾಡ್ಬೇಕಾಗುತ್ತಾ?
ಸಾರಿಗೆ ಸಚಿವ ದಯಾಶಂಕರ್ ಸಿಂಗ್ ‘‘ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’’ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ