/newsfirstlive-kannada/media/post_attachments/wp-content/uploads/2024/12/UK_BUS_ACCIDENT.jpg)
ಡೆಹ್ರಾಡೂನ್: 1500 ಅಡಿ ಆಳದ ಕಮರಿಗೆ ಬಸ್ವೊಂದು ಬಿದ್ದು ನಾಲ್ವರು ಪ್ರಾಣ ಕಳೆದುಕೊಂಡಿದ್ದು 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ನ ಭೀಮತಾಲ್ ಬಳಿಯ ಬೋಹ್ರಾ ಕುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಬಸ್ ಅಲ್ಮೋರಾದಿಂದ ಹಲ್ದಾವಾನಿಗೆ ತೆರಳುತ್ತಿರುವಾಗ ಬೋಹ್ರಾ ಕುನ್ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ 1500 ಅಡಿ ಆಳದ ಕಮರಿಗೆ ಬಿದ್ದಿದೆ. ಇದರಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 27 ಪ್ರಯಾಣಿಕರ ಪೈಕಿ ನಾಲ್ವರು ಸ್ಥಳದಲ್ಲೇ ಹಸುನೀಗಿದ್ದಾರೆ. ಉಳಿದ 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಕೆಲವ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಗೆಸ್ ಮಾಡಿ.. ಸಾಂತಾ ಕ್ಲಾಸ್ನಲ್ಲಿ ಇರುವ ಈ ಸ್ಟಾರ್ ಕ್ರಿಕೆಟ್ ದಿಗ್ಗಜ ಯಾರು..?
ಬಸ್ ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡವು. ತೀರ ಆಳಕ್ಕೆ ಬಸ್ ಬಿದ್ದಿದ್ದರಿಂದ ಗಾಯಾಳುಗಳನ್ನು ಮೇಲಕ್ಕೆ ಕರೆತರಲು ಹರಸಾಹಸವೇ ಪಡಬೇಕಾಯಿತು. ಘಟನೆ ನಡೆದ ಸ್ಥಳದಿಂದ ಆಸ್ಪತ್ರೆಗೆ ಸುಮಾರು 15 ಆಂಬುಲೆನ್ಸ್ಗಳು ಕಾರ್ಯಚರಣೆ ನಡೆಸಿವೆ. ಗಾಯಾಳುಗಳನ್ನು ಹಲ್ದಾವಾನಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಈ ಘಟನೆ ಸಂಬಂಧ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಸ್ಥಳೀಯ ಅಧಿಕಾರಿಗಳ ಜೊತೆ ಸಿಎಂ ನಿರಂತರ ಸಂಪರ್ಕದಲ್ಲಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚದ ಕುರಿತು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ