/newsfirstlive-kannada/media/post_attachments/wp-content/uploads/2024/07/Vijayapura-3.jpg)
ವಿಜಯಪುರ: ಬೆಳ್ಳಂಬೆಳಗ್ಗೆ ಬಸ್ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಬಸ್ ಅಪಘಾತದಲ್ಲಿ ವ್ಯಕ್ತಿ ರಸ್ತೆಗೆ ಬಿದ್ದು ಅಲ್ಲೇ ಉಚಿರು ಚೆಲ್ಲಿದ್ದಾರೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಅಶೋಕ ಪರ್ಜೆನವರ್ (58) ಎಂದು ಗುರುತಿಸಲಾಗಿದೆ. ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: VIDEO: ನದಿ ನೀರಿನಲ್ಲಿ ಹುಚ್ಚಾಟ ಮೆರೆದ ಡ್ರೈವರ್.. ಕಣ್ಣ ಮುಂದೆಯೇ ಕೊಚ್ಚಿ ಹೋಯ್ತು ಲಾರಿ
ಖಾಸಗಿ ಬಸ್ನಡಿಗೆ ಬಿದ್ದು ಅಶೋಕ ಕೊನೆಯುಸಿರು ಚೆಲ್ಲಿದ್ದಾರೆ. ಬಸ್ ಬೆಂಗಳೂರಿನಿಂದ ವಿಜಯಪುರಕ್ಕೆ ಕಡೆಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ದರ್ಶನ್ ಹೊರಗೆ ಬರಲಿ ಅಂತಾ ಕಾಯ್ತಿದ್ದೀವಿ; ನಟಿ ನಿಖಿತಾ ಸ್ವಾಮಿ
ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ಅಶೋಕ ಮೇಲೆ ಖಾಸಗಿ ಬಸ್ ಹರಿದಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ