newsfirstkannada.com

‘ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ.. ಫ್ರೀ.. ಫ್ರೀ’- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

Share :

30-05-2023

    ಮಹಿಳೆಯರಿಗೆಲ್ಲ ಸಚಿವ ರಾಮಲಿಂಗಾ ರೆಡ್ಡಿ ಭರವಸೆ

    ಉಚಿತ ಬಸ್ ಪ್ರಯಾಣ ಜಾರಿಗೆ ಸಾರಿಗೆ ಸಚಿವರ ಸಭೆ

    ಕ್ಯಾಬಿನೆಟ್ ಸಭೆಯಲ್ಲಿ ಗ್ಯಾರಂಟಿಗೆ ಗೈಡ್‌ಲೈನ್ಸ್‌ ಫಿಕ್ಸ್‌!

ಬೆಂಗಳೂರು: ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಮಹಿಳೆಯರಿಗೆಲ್ಲರಿಗೂ ಬಸ್ ಪ್ರಯಾಣ ಫ್ರೀ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹೇಗೆ ಅನ್ನೋದು ನಿರ್ಧಾರವಾಗಲಿದೆ ಎಂದಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಮಾಲೋಚನೆ ಬಳಿಕ ಮಾಹಿತಿ ನೀಡಿದ ಸಚಿವರು, ನಾನು ಸ್ಪಷ್ಟವಾಗಿ ಹೇಳುತ್ತೇನೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್​ ಪ್ರಯಾಣ ಫ್ರೀ.. ಫ್ರೀ. ಬಸ್​​​ನಲ್ಲಿ ಓಡಾಡೋ ಮಹಿಳೆಯರಿಗೆ ಪ್ರಯಾಣ ಉಚಿತ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಬರೋದ್ರಲ್ಲಿ ಅನುಮಾನವಿಲ್ಲ. ಇಂದು ಸಾರಿಗೆ ನಿಗಮ ಮಂಡಳಿಯಿಂದ ಮಾಹಿತಿ ಸಂಗ್ರಹಿಸಲಾಗಿದೆ. ಜೂನ್ 1ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದೆ. ಅಂದು ಉಚಿತ ಬಸ್ ಪ್ರಯಾಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಘೋಷಣೆ ಮಾಡ್ತಾರೆ. ಕ್ಯಾಬಿನೆಟ್ ಸಭೆ ಬಳಿಕ ಎಲ್ಲವನ್ನೂ ಸ್ಪಷ್ಟವಾಗಿ ಹೇಳುತ್ತಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಹಲವು ಸಾರಿಗೆ ಬಸ್‌ಗಳಲ್ಲಿ ಟಿಕೆಟ್ ಖರೀದಿಸಲು ಮಹಿಳಾ ಪ್ರಯಾಣಿಕರು ನಿರಾಕರಿಸಿದ್ದರು. ಆದಷ್ಟು ಬೇಗ ಫ್ರೀ ಬಸ್ ಪ್ರಯಾಣದ ಗ್ಯಾರಂಟಿ ಯೋಜನೆ ಈಡೇರಿಸುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕಸರತ್ತು ಮಾಡಿದೆ.

ಇಂದು BMTC, KSRTC, NWKRTC, NEKRTC ಎಂಡಿಗಳ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದರು. ಈ ಸಭೆಯಲ್ಲಿ ಯಾವ ನಿಗಮಕ್ಕೆ ಎಷ್ಟು ಆದಾಯ, ಎಷ್ಟು ನಷ್ಟದಲ್ಲಿವೆ. ಮಹಿಳೆಯರಿಗೆ ಫ್ರೀ ಪಾಸ್​ಗೆ ಎಷ್ಟು ಕೋಟಿ ಖರ್ಚಾಗುತ್ತೆ ಅನ್ನೋ ಮಾಹಿತಿ ಸಂಗ್ರಹಿಸಲಾಗಿದೆ. ಫ್ರೀ ಬಸ್ ಪಾಸ್ ಯೋಜನೆಗೆ ವರ್ಷಕ್ಕೆ ಅಂದಾಜು 3,200 ಕೋಟಿ ರೂಪಾಯಿ ಖರ್ಚಾಗುತ್ತದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

‘ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ.. ಫ್ರೀ.. ಫ್ರೀ’- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ

https://newsfirstlive.com/wp-content/uploads/2023/05/Ramlinga-Reddy-1.jpg

Load More