/newsfirstlive-kannada/media/post_attachments/wp-content/uploads/2024/03/SIDDARAMAIAH-23.jpg)
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಠಿಸಿ ಭೂಮಿ ಖರೀದಿಸಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಂದ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ಕರೆಂಟ್ ಇಲ್ಲ! ಮೊಬೈಲ್ ಟಾರ್ಚ್ನಲ್ಲೇ ರೋಗಿಗೆ ಚಿಕಿತ್ಸೆ! ಈ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಹೀಗಿದೆ ನೋಡಿ
ದೂರಿನಲ್ಲಿ ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು ಹಾಗೂ ಕುಟುಂಬದವರು, ಜಿಲ್ಲಾಧಿಕಾರಿ, ತಹಶೀಲ್ದಾರ್, ಮುಡಾ ಅಧ್ಯಕ್ಷರ ವಿರುದ್ಧ ದೂರು ದಾಖಲಾಗಿದೆ. ಆದರೆ ಈಗಾಗಲೇ ಮುಡಾ ಪ್ರಕರಣ ಕುರಿತು ತನಿಖೆ ನಡೆಯುತ್ತಿರುವ ಕಾರಣ ಮತ್ತೊಂದು ತನಿಖೆ ಸಾಧ್ಯವಿಲ್ಲ ಎಂದು ಪೊಲೀಸರು ಹಿಂಬರೆಹ ನೀಡಿದ್ದಾರೆ.
ಇದನ್ನೂ ಓದಿ: ಮುಂದುವರೆದ ವರುಣಾರ್ಭಟ.. KRSಗೆ ಬಂತು ನೀರೇ ನೀರು.. ಇಂದು ಡ್ಯಾಂನ ನೀರಿನ ಮಟ್ಟ ಎಷ್ಟಿದೆ ಗೊತ್ತಾ?
ಸದ್ಯ ನಕಲಿ ದಾಖಲೆ ಸೃಷ್ಠಿಸಿ, ಭೂಮಿ ಖರೀದಿಸಿದ್ದಾರೆಂದು ಆರೋಪದ ಕುರಿತಾಗಿ ದಾಖಲೆಗಳಲ್ಲಿ ಜಮೀನು ಮಾರಪ್ಪ ಎಂಬವರ ಹೆಸರಲ್ಲಿದೆ. ಆದರೆ ಅನಧಿಕೃತ ವ್ಯಕ್ತಿಗಳನ್ನ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಲಪಟಾಯಿಸಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ದಾಖಲೆಗಳ ಸಮೇತ ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ