ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿ.ವೈ ವಿಜಯೇಂದ್ರ ಭೇಟಿ!
ಮಾಜಿ ಸಿಎಂ BSY ಪುತ್ರ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾದರೂ ಇದುವರೆಗೂ ಬಿಜೆಪಿ ವಿರೋಧ ಪಕ್ಷ ನಾಯಕನನ್ನು ನೇಮಿಸಿಲ್ಲ. ಈ ನಡುವೆ ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಇದರ ಮಧ್ಯೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಶಾಸಕ ಬಿ.ವೈ ವಿಜಯೇಂದ್ರ, ಬಿಜೆಪಿ ವರಿಷ್ಠ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ಹೌದು, ರಾಜ್ಯ ಬಿಜೆಪಿಯಲ್ಲಿ ಹಲವು ಬದಲಾವಣೆಯನ್ನ ತರುವ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವ; ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಬಿ.ವೈ ವಿಜಯೇಂದ್ರಗೆ ಪಟ್ಟ ಸಾಧ್ಯತೆ
ಇನ್ನು, ಚುನಾವಣೆಗೆ ಮುನ್ನವೇ ಲಿಂಗಾಯತ ಸಮುದಾಯದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿತ್ತು. ಇದರ ಪರಿಣಾಮ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಗೆ ಹೀನಾಯ ಸೋಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಾದ ತಪ್ಪು ಮತ್ತೆ ಲೋಕಸಭಾ ಎಲೆಕ್ಷನ್ಗೆ ರಿಪೀಟ್ ಆಗಬಾರದು ಎಂದು ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆಯಾಗಿದೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆ ಮೇಲೆ ಹದ್ದಿನ ಕಣ್ಣು
ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡ ಮತಬ್ಯಾಂಕ್ ಮರಳಿ ಪಡೆಯಲು ಬಿಜೆಪಿ ಹೈಕಮಾಂಡ್ ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಪ್ರಬಲ ಲಿಂಗಾಯತ ಸಮುದಾಯದ ನಾಯಕ ಬಿ.ಎಸ್ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ವಿಜಯೇಂದ್ರ ನಾಯಕತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ತಂತ್ರ ಹೆಣೆದಿದೆ. ಹೀಗೊಂದು ವಿಚಾರ ಸದ್ಯ ರಾಜಕೀಯ ಪಡಸಾಲೆಯಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಅಮಿತ್ ಶಾ, ಬಿ.ವೈ ವಿಜಯೇಂದ್ರ ಭೇಟಿ ಇದಕ್ಕೆ ಪುಷ್ಠಿ ನೀಡಿದಂತಿದೆ.
ಯುವಕರಿಗೆ ಆದ್ಯತೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಬಳಿಕ ಅಮಿತ್ ಶಾ ಅವರನ್ನ ಭೇಟಿ ಮಾಡಿದ ವಿಜಯೇಂದ್ರ ರಾಜ್ಯ ರಾಜಕೀಯದಲ್ಲಿ ಯುವಕರಿಗೆ ಆದ್ಯತೆ ನೀಡುವ ಬಗ್ಗೆಯೂ ಚರ್ಚಿಸಿದ್ದಾರೆ. ಬರೋಬ್ಬರಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವ ಹೈಕಮಾಂಡ್, ಇನ್ನೊಂದು ವಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ಇರೋ ಗೊಂದಲಗಳಿಗೆ ಪರಿಹಾರ ನೀಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ