/newsfirstlive-kannada/media/media_files/2025/08/02/eastern-railway-recruitment33-2025-08-02-19-36-05.jpg)
ಗವರ್ನಮೆಂಟ್ ಜಾಬ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ! ಪ್ರತಿಯೊಬ್ಬರಿಗೂ ಸರ್ಕಾರಿ ಉದ್ಯೋಗ ಪಡೆಯೋ ಆಸೆ ಇದ್ದೇ ಇರುತ್ತೆ. ಅದರಲ್ಲೂ ಸೈನ್ಸ್, ಕಾಮರ್ಸ್, ಆರ್ಟ್ಸ್ ಯಾವುದೇ ವಿಷಯ ಓದಿರಲಿ. ಎಲ್ಲರಿಗೂ ಸರ್ಕಾರಿ ಕೆಲಸ ಬೇಕೇ ಬೇಕು. ಅಷ್ಟರಮಟ್ಟಿಗೆ ಜನ ಸರ್ಕಾರಿ ಕೆಲಸದ ಹಿಂದೆ ಬಿದ್ದಿದ್ದಾರೆ. ಹಗಲು ರಾತ್ರಿ ನಿದ್ದೆಗೆಟ್ಟು ಓದುತ್ತಾರೆ. ಆರೋಗ್ಯ ಕೆಟ್ರೂ ಪರ್ವಾಗಿಲ್ಲ ಸರ್ಕಾರಿ ಕೆಲಸ ಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಉದ್ಯೋಗದಲ್ಲಿ ಸಿಗೋ ಭದ್ರತೆ.
ಮಾಸ್ಟರ್ ಡಿಗ್ರಿ ಮುಗಿದ ಬೆನ್ನಲ್ಲೇ ಎಷ್ಟೋ ವಿದ್ಯಾರ್ಥಿಗಳು KSET, NET ಎರಡು ಎಕ್ಸಾಂ ಕ್ಲಿಯರ್ ಮಾಡಿಕೊಂಡಿದ್ದಾರೆ. ವರ್ಷಗಟ್ಟಲೇ ಕಷ್ಟಪಟ್ಟು ಓದಿ ಎಕ್ಸಾಂ ಕ್ಲಿಯರ್ ಮಾಡಿದ್ದಾರೆ. ಬ್ಯಾಚುಲರ್ ಡಿಗ್ರಿ ಮಾಡಿದವರು ಬೋಧಕೇತರ ಹುದ್ದೆಗಳ ಭರ್ತಿಗೆ ಕಾಯುತ್ತಿದ್ದಾರೆ. BA, BE, BSc, MA, MBA, BS, MS, MSW ಸೇರಿದಂತೆ PhD ವಿದ್ಯಾರ್ಥಿಗಳು ಸರ್ಕಾರಿ ಕೆಲಸಕ್ಕಾಗಿ ತಪಸ್ಸು ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ನೇಮಕಾತಿ ಮಾಡಲಿದೆ? ಎಂದು ಎದುರು ನೋಡುತ್ತಿದ್ದಾರೆ.
ಭಾರತೀಯರಲ್ಲಿ ಸರ್ಕಾರಿ ಕೆಲಸದ ಮೇಲೆ ವ್ಯಾಮೋಹಕ್ಕೆ ಕಾರಣ ಒಂದಿದೆ. ಜಾಬ್ ಸೆಕ್ಯೂರಿಟಿ ಒಂದು ದೊಡ್ಡ ಅಂಶವಾದರೆ, ಉದ್ಯೋಗದಿಂದ ಸಿಗುವ ಇತರೆ ಸೌಲಭ್ಯಗಳು ಜನರನ್ನು ಆಕರ್ಷಿಸುತ್ತವೆ. ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಆದ್ರೆ ಲೈಫ್ ಸೆಟಲ್ ಅನ್ನೋದು ಎಲ್ಲರ ನಂಬಿಕೆ. ಇಂಥವರಿಗೆ ಗುಡ್ನ್ಯೂಸ್ ಒಂದಿದೆ.
ನೀವು ಡಿಗ್ರಿ ಮಾಡಿದ್ದು, ಸರ್ಕಾರಿ ನೌಕರಿ ಹುಡುಕುತ್ತಿದ್ದರೆ ನಿಮಗೊಂದು ಸುವರ್ಣಾವಕಾಶ. ಪೂರ್ವ ರೈಲ್ವೆಯ ರೈಲ್ವೆ ನೇಮಕಾತಿ ಕೋಶ 3115 ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಇದೇ ತಿಂಗಳು ಆಗಸ್ಟ್ 14 ರಿಂದ ಸೆಪ್ಟೆಂಬರ್ 13 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcer.org ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಹುದ್ದೆಗಳನ್ನು ಅಪ್ರೆಂಟಿಸ್ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ
ಯಾರ್ ಯಾರು ಅರ್ಜಿ ಸಲ್ಲಿಸಬಹುದು? ಅಂತಾ ನೋಡೋದಾದ್ರೆ..!
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಶೇ.50 ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಿತ ಟ್ರೇಡ್‌ನಲ್ಲಿ NCVT/SCVT ನೀಡಿದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು. ಇವ್ರ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು. OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಲಾಗುತ್ತದೆ. SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗುತ್ತದೆ. ಹಾಗೆಯೇ ಸಾಮಾನ್ಯ ಮತ್ತು ಒಬಿಸಿಯವ್ರು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರೋದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ? ಅಂತಾ ನೋಡೋದಾದ್ರೆ..!
ಅಧಿಕೃತ ವೆಬ್‌ಸೈಟ್ rrcer.org ಗೆ ಭೇಟಿ ನೀಡಬೇಕು. ಇಲ್ಲಿ ಅಪ್ರೆಂಟಿಸ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಗತ್ಯವಿರೋ ವಿವರಗಳನ್ನು ನಮೂದಿಸುವ ಮೂಲಕ ನೋಂದಾಯಿಸಬೇಕು. ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಬಳಿಕ ಶುಲ್ಕ ಪಾವತಿಸಿ ಸಲ್ಲಿಸಬೇಕು.
ಶೈಕ್ಷಣಿಕ ಅರ್ಹತೆ ಮತ್ತು ಇತರೆ ಅರ್ಹತೆಯ ಆಧಾರದ ಮೇಲೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಆಸಕ್ತರು ರೈಲ್ವೆ ಹೊರಡಿಸಿದ ಅಧಿಕೃತ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಬಹುದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ