ಜಂಟಿ ಪ್ರವೇಶ ಪರೀಕ್ಷೆ ಅಂದ್ರೆ ಜೆಇಇ. ಇದು ಭಾರತದ ಅತ್ಯಂತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಲ್ಲಿ ಒಂದು. ಜೆಇಇ ಪರೀಕ್ಷೆಯಲ್ಲಿ ಚೆನ್ನಾಗಿ ಸ್ಕೋರ್​ ಮಾಡಿದ್ರೆ ವಿದ್ಯಾರ್ಥಿಗಳು ದೇಶದ ಪ್ರಸಿದ್ಧ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವಿವಿಧ ಉನ್ನತ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.
ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (IITs). ಐಐಟಿಗಳು ಜೆಇಇ ಅಡ್ವಾನ್ಸ್​ಡ್​​​ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತವೆ. ಇಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಕೆಮಿಕಲ್ ಎಂಜಿನಿಯರಿಂಗ್, ಏರೋಸ್ಪೇಸ್ ಎಂಜಿನಿಯರಿಂಗ್, ಮೆಟಲರ್ಜಿಕಲ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಫಿಸಿಕ್ಸ್, ಮತ್ತು ಡೇಟಾ ಸೈನ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನಂತಹ ಉನ್ನತ ಮಟ್ಟದ ಕೋರ್ಸ್‌ಗಳನ್ನು ನೀಡಲಾಗುತ್ತದೆ.
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳು (NITs). ಎನ್‌ಐಟಿಗಳು ಜೆಇಇ ಮೇನ್ ಅಂಕಗಳನ್ನು ಆಧರಿಸಿ ಪ್ರವೇಶ ನೀಡುತ್ತವೆ. ಇವು ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಟೆಕ್ನಾಲಜಿ (IT), ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಸಿವಿಲ್, ಪ್ರೊಡಕ್ಷನ್ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಸೇರಿದಂತೆ ವ್ಯಾಪಕ ಶ್ರೇಣಿಯ ಪದವಿ ಕಾರ್ಯಕ್ರಮಗಳನ್ನು ಹೊಂದಿವೆ.
ಇದನ್ನೂ ಓದಿ:ಮಕ್ಕಳಲ್ಲಿ ಡಿಜಿಟಲ್ ಅಡಿಕ್ಷನ್ ತಡೆಯಲು ವಯಸ್ಸಿನ ಮಿತಿಯ ನಿಯಮ ರೂಪಿಸಲು ಆರ್ಥಿಕ ಸಮೀಕ್ಷೆಯಲ್ಲಿ ಸಲಹೆ
ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು (IIITs). ಐಐಐಟಿಗಳು ಮುಖ್ಯವಾಗಿ ತಂತ್ರಜ್ಞಾನ ಆಧಾರಿತ ಕೋರ್ಸ್‌ಗಳ ಮೇಲೆ ಗಮನ ಹರಿಸುತ್ತವೆ. ಜೆಇಇ ಮೇನ್ ಮೂಲಕ ಇಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಇನ್ಫರ್ಮೇಷನ್ ಟೆಕ್ನಾಲಜಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್, ಡೇಟಾ ಸೈನ್ಸ್, ಸೈಬರ್ ಸೆಕ್ಯೂರಿಟಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಮತ್ತು ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್‌ಗಳನ್ನು ಅಭ್ಯಸಿಸಬಹುದು.
ಕೇಂದ್ರೀಯ ವಿಶ್ವವಿದ್ಯಾಲಯಗಳು ಯಾವುವು?
ದೆಹಲಿ ಟೆಕ್ನಾಲಜಿಕಲ್ ಯೂನಿವರ್ಸಿಟಿ (DTU), ನೇತಾಜಿ ಸುಭಾಷ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (NSUT), ಜಾಮಿಯಾ ಮೀಲಿಯಾ ಇಸ್ಲಾಮಿಯಾ ಮತ್ತು ಅಲಿಗಢ ಮುಸ್ಲಿಂ ಯೂನಿವರ್ಸಿಟಿಯಂತಹ ಹಲವಾರು ಕೇಂದ್ರೀಯ ವಿಶ್ವವಿದ್ಯಾಲಯಗಳು ಜೆಇಇ ಅಂಕಗಳನ್ನು ಸ್ವೀಕರಿಸುತ್ತವೆ. ಇಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಬಯೋಟೆಕ್ನಾಲಜಿ ಮತ್ತು ಎನ್ವಿರಾನ್ಮೆಂಟಲ್ (ಪರಿಸರ) ಎಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿವೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಹುದ್ದೆಗೆ ನೇಮಕಾತಿ : ಯಾಱರು ಅರ್ಜಿ ಸಲ್ಲಿಸಬಹುದು ಗೊತ್ತಾ?
ಇಷ್ಟೇ ಅಲ್ಲ ಸರ್ಕಾರಿ ಕಾಲೇಜುಗಳಲ್ಲದೆ, ಬಿಟ್ಸ್ ಪಿಲಾನಿ (BITS Pilani), ಬಿಐಟಿ ಮೆಸ್ರಾ (BIT Mesra), ಎಲ್.ಎನ್.ಎಂ.ಐ.ಐ.ಟಿ ಜೈಪುರ, ಶಿವ ನಾಡರ್ ಯೂನಿವರ್ಸಿಟಿ, ಯುಪಿಇಎಸ್ ಡೆಹ್ರಾಡೂನ್, ಎಸ್‌ಆರ್‌ಎಂ ಯೂನಿವರ್ಸಿಟಿ, ಎಲ್‌ಪಿಯು ಮತ್ತು ಚಿತ್ಕಾರಾ ಯೂನಿವರ್ಸಿಟಿಯಂತಹ ಅನೇಕ ಖಾಸಗಿ ಸಂಸ್ಥೆಗಳು ಜೆಇಇ ಮೇನ್ ಅಂಕಗಳನ್ನು ಪರಿಗಣಿಸುತ್ತವೆ. ಇವುಗಳಲ್ಲಿ ರೋಬೋಟಿಕ್ಸ್, ಮೆಕಾಟ್ರಾನಿಕ್ಸ್, ಪೆಟ್ರೋಲಿಯಂ ಎಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (IoT) ನಂತಹ ಉದಯೋನ್ಮುಖ ತಂತ್ರಜ್ಞಾನಗಳ ಕೋರ್ಸ್‌ಗಳಿವೆ.
ಹಲವಾರು ರಾಜ್ಯ ಸರ್ಕಾರಿ ಕಾಲೇಜುಗಳು ಸಹ ಜೆಇಇ ಮೇನ್ ಅಂಕಗಳ ಆಧಾರದ ಮೇಲೆ ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫರ್ಮೇಷನ್ ಸೈನ್ಸ್ ಕೋರ್ಸ್‌ಗಳಿಗೆ ಪ್ರವೇಶ ನೀಡುತ್ತವೆ. ಇದು ವಿದ್ಯಾರ್ಥಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ:ಯಾವ ರೀತಿ ಉದ್ಯೋಗ ಆಯ್ಕೆ ಮಾಡಿಕೊಳ್ಳಬೇಕು? ಬಿಗ್ ಟೆಕ್ ಕಂಪನಿ ಅಥವಾ ಸ್ಟಾರ್ಟಪ್ ಕಂಪನಿ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us